ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪುನರ್ ವಸತಿ ಹೊರಗುತ್ತಿಗೆ ನೌಕರರು ಗೌರವ ಧನ ಮತ್ತು ಸೇವೆ ಖಾಯಂಗೊಳಿಸಲು ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಬುಧವಾರ ಭೇಟಿ ಮಾಡಿದ ನೌಕರರು, ಕಡಿಮೆ ವೇತನದಿಂದ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಅಲ್ಲದೇ ದುಬಾರಿ ವೆಚ್ಚ ಮಾಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಬರುವ ಕಡಿಮೆ ವೇತನದಲ್ಲಿ ಮನೆ ಬಾಡಿಗೆ ಕಟ್ಟಲು ಆಗುವುದಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಗುವುದಿಲ್ಲ. ಗೌರವ ಧನ ಹೆಚ್ಚಳ ಮತ್ತು ಸೇವೆಯನ್ನು ಖಾಯಂಗೊಳಿಸಲು ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅನೇಕ ನೌಕರ ಮುಖಂಡರು ಹಾಗೂ ಮಹಿಳಾ ನೌಕರರು ಉಪಸ್ಥಿತರಿದ್ದರು.