ದಾವಣಗೆರೆ ಆ.19 (Davanagere ) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೋಸ್ಟ್ -ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
Read also : Siddaramaiah | ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.