ದಾವಣಗೆರೆ (Davanagere ): ಜಿಲ್ಲಾ ಮಟ್ಟದ ಕ್ರೀಡಾಕೂಟ ವಿಭಾಗದಲ್ಲಿ ಈಜು ಸ್ಪರ್ಧೆಯಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎಂ.ಛವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್ ತಿಳಿಸಿದ್ದಾರೆ.
ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಕ ಕೆ.ರವಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಮಟ್ಟದ ನೇರ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಎನ್.ಎಂ.ಛವಿ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ನಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವೀತಿಯ ಸ್ಥಾನ ಪಡೆದು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Read alao : Davanagere | ರಾಷ್ಟ್ರೀಯ ಲೋಕ್ ಅದಾಲತ್ : ರಾಜಿ ಮೂಲಕ ಮತ್ತೆ ಒಂದಾದ ದಂಪತಿಗಳು
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಗುರುವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.