ದಾವಣಗೆರೆ: ಈ ಬಾರಿಯ 2023-24ನೇ ಸಾಲಿನ ಎಸ್ಸೆಸ್ಸೆಲ್ಪಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ ಎಂದು ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗೆ ನೋಂದಣಿ ಮಾಡಿಸಿದ್ದ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 29 ಅತ್ಯುತ್ತಮ, 38 ಪ್ರಥಮ ದರ್ಜೆ ಹಾಗೂ 11 ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಶಾಲೆಯ ಬಿ.ಜಿ.ಶ್ರೀಭುವನ್ 612 (ಶೇ.97.92) ಅಂಕ, ಎಸ್.ಜೆ.ಭೂಮಿಕ 601 (ಶೇ.96.16) ಅಂಕ, ಬಿ.ಕವನಶ್ರೀ 601(ಶೇ.96.16) ಅಂಕ ಹಾಗೂ ಎಚ್.ಎಂ.ಶ್ರೀದೇವಿ 600 (ಶೇ.96) ಅಂಕ ಪಡೆದಿದ್ದಾರೆ.
ಶಾಲೆಗೆ ಶೇ.100ರಷ್ಟು ಫಲಿತಾಂಶ ಬರಲು ಕಾರಣರಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಸುಜಾತ ಕೃಷ್ಣ, ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್, ಸದಸ್ಯೆ ಕೆ.ವಿ.ಸುಜಾತ, ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಶಶಿಕಲಾ ಅಭಿನಂದನೆ ಸಲ್ಲಿಸಿದ್ದಾರೆ.