Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವೈದಿಕ ಪದ್ಧತಿಯಿಂದ ಶೂದ್ರರ ಜೊತೆಗೆ ಮಹಿಳೆಯರ ಶೋಷಣೆ :ಡಾ.ನಾಗಲಕ್ಷ್ಮಿ ಚೌಧರಿ
ತಾಜಾ ಸುದ್ದಿ

ವೈದಿಕ ಪದ್ಧತಿಯಿಂದ ಶೂದ್ರರ ಜೊತೆಗೆ ಮಹಿಳೆಯರ ಶೋಷಣೆ :ಡಾ.ನಾಗಲಕ್ಷ್ಮಿ ಚೌಧರಿ

Dinamaana Kannada News
Last updated: December 23, 2025 3:13 am
Dinamaana Kannada News
Share
Davanagere
SHARE

ಹರಿಹರ: ಅಮಾನವೀಯವಾದ ವೈದಿಕ ಪದ್ಧತಿಯಿಂದಾಗಿ ಶೂದ್ರರ ಜೊತೆಗೆ ಮಹಿಳಾ ಸಮುದಾಯದ ಶೋಷಣೆಯೂ ಎಗ್ಗಿಲ್ಲದೆ ನಡೆದಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.

ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸ್ಥಳೀಯ ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸದ್ಭಾವನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ವೈದಿಕ ಪದ್ಧತಿಯಿಂದಾಗಿ ಈ ಹಿಂದೆ ಶೂದ್ರರು ಗ್ರಾಮದೊಳಗೆ ಪ್ರವೇಶ ಮಾಡುವಾಗ ಹಿಂದೆ ಪೊರಕೆ ಕಟ್ಟಿಕೊಳ್ಳುವುದು, ಶಿಕ್ಷಣ, ಆರೋಗ್ಯ, ಧರ್ಮಾಚರಣೆಯಿಂದ ದೂರ ಇಡಲಾಗಿತ್ತು. ಎಲ್ಲಾ ಸಮುದಾಯದ ಮಹಿಳೆಯರನ್ನೂ ಕೂಡ ವೈದಿಕ ಪದ್ಧತಿ ಗುಲಾಮಗಿರಿಗೆ ತಳ್ಳಿ ಕೀಳಾಗಿ ಕಾಣುತ್ತಿತ್ತು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾರಣದಿಂದ ದೇಶದ ಶೂದ್ರರ ಜೊತೆಗೆ ಎಲ್ಲಾ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿರುವದರಿಂದಲೆ ಇಂದು ಮಹಿಳೆ ಜನಪ್ರತಿನಿಧಿ, ಸಚಿವೆ ಇತರೆ ಸಾಂವಿಧಾನಿಕ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂಬುದನ್ನು ಮರೆಯಬಾರದು ಎಂದರು.

ಜಿ.ಬಿ.ವಿನಯ್ ಕುಮಾರ್ ಮಾತನಾಡಿ, ಬಡವರ ಮಕ್ಕಳು ಪ್ರತಿಭಾವಂತರಿದ್ದರೆ ಅವರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತದಂತೆ ಶಿಕ್ಷಣವನ್ನು ಪಸರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

Read also : ಮರ್ಯಾದೆ ಹತ್ಯೆ ಪ್ರಕರಣ:ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ

ವಕೀಲೆ ಜಿ.ಎಚ್.ಭಾಗೀರಥಿ ಮಾತನಾಡಿ, ಎಲ್ಲಾ ಧರ್ಮಿಯರಿಗೂ ಸಂವಿಧಾನದ ಪೀಠಿಕೆತೆ ಮಂತ್ರ, ಪ್ರಾರ್ಥನೆಯಾಗಬೇಕು. ಮಹಿಳಾ ಆಯೋಗದ ಅಧ್ಯಕ್ಷರು ಕ್ರಿಯಾಶೀಲರಾಗಿ ಹಾಗೂ ನಿರ್ಭೀತಿಯಿಂದ ಮಾಡುತ್ತಿರುವ ಸೇವೆಯಿಂದ ರಾಜ್ಯದ ಮಹಿಳಾ ಸಮುದಾಯದಲ್ಲಿ ಆತ್ಮಸ್ಥೈರ್ಯ ಮೂಡಿದೆ ಎಂದರು.

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪರವರು ಹುಟ್ಟಿರುವ ಮನೆಯನ್ನು ಸ್ಮಾರಕವಾಗಿಸಬೇಕು, ದಾವಣಗೆರೆ ವಿವಿಗೆ ಪ್ರೊ.ಬಿ.ಕೃಷ್ಣಪ್ಪರ ಹೆಸರು ಇಡಬೇಕು, ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ನಿರ್ವಸತಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರದ ಗಮನ ಸೆಳೆಯಬೇಕೆಂದು ಡಾ.ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ನೀಡಿದರು.

ಕದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯಿಂದ ಪ್ರೇರಣೆಗೊಂಡು ಹರಿಹರ ದಲಿತ ಚಳವಳಿಯ ತವರೂರು ಆಗಿ ಬೆಳೆಯಿತು. ದಲಿತರು, ಮಹಿಳೆಯರು ಸಂವಿಧಾನ ನೀಡಿರುವ ಹಕ್ಕು ಹಾಗೂ ಜವಾಬ್ದಾರಿಗಳನ್ನು ಅರಿಯಬೇಕೆಂದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿ.ಬಿ.ವಿನಯ್ ಕುಮಾರ್ ಸದ್ಭಾವನ ಪ್ರಶಸ್ತಿ ನೀಡಿದರು.

ಜಿಪಂ ಮಾಜಿ ಅಧ್ಯಕ್ಷ ಎ.ಗೋವಿಂದರೆಡ್ಡಿ, ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ವಿ.ಟಿ.ನಾಗರಾಜ್, ಬೊಂಗಾಳೆ ಆಸ್ಪತ್ರೆ ಮುಖ್ಯಸ್ಥ ಸಚಿನ್ ಬೊಂಗಾಳೆ, ಬಿಇಒ ಡಿ.ದುರುಗಪ್ಪ, ಭದ್ರಾವತಿ ನಿವೃತ್ತ ಪ್ರಾಚಾರ್ಯ ಶಿವಬಸಪ್ಪ, ಕದಸಂಸ ಶಿವಮೊಗ್ಗ ಜಿಲ್ಲಾ ಸಂಚಾಲಕ ಎಂ.ಏಳಕೋಟಿ, ಹೊನ್ನಾಳಿಯ ಚನ್ನಕೇಶವ, ಬುಳ್ಳಸಾಗರದ ಸಿದ್ಧರಾಮಣ್ಣ, ಸಿಡಿಪಿಒ ಪ್ರಿಯದರ್ಶಿನಿ, ಬಿ.ಮಗ್ದುಮ್, ಅಲೆಮಾರಿ ಸಮುದಾಯದ ಮುಖಂಡ ಸಣ್ಣ ಅಜ್ಜಯ್ಯ, ದುರುಗಪ್ಪ, ವಕೀಲ ವೀರೇಶ್, ಮಂಜುನಾಥ್ ಎಂ.ಎಸ್.ಕೊಕ್ಕನೂರು, ಕಡ್ಲೆಗೊಂದಿ ತಿಮ್ಮಣ್ಣ, ಚೌಡಪ್ಪ ಸಿ.ಭಾನುವಳ್ಳಿ, ಗದಿಗೆಪ್ಪ ವಾಸನ, ಸುರೇಶ್ ಬಿ. ಕೆಂಚನಹಳ್ಳಿ, ಧರ್ಮರಾಜ್ ಹಳ್ಳಿಹಾಳ್, ರಾಮಣ್ಣ ಹಿಂಡಸಘಟ್ಟ, ಹನುಮಂತ ಡಿ. ಎಳೆಹೊಳೆ, ಗುಡ್ಡದಹಳ್ಳಿ ಮಂಜಪ್ಪ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿಡಾ.ನಾಗಲಕ್ಷ್ಮಿ ಚೌಧರಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ದಾವಣಗೆರೆ ಮರ್ಯಾದೆ ಹತ್ಯೆ ಪ್ರಕರಣ:ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
Next Article Peasant song Peasant song|ಈ ನಾಡಿಗೆ ಐರಾವತ ಬಲವೇ ರೈತ : ಮಂಜುನಾಥ.ಜಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ವೈದ್ಯರು ಇಲ್ಲದ್ದನ್ನು ಕಂಡು ಶಾಸಕ ಬಸವಂತಪ್ಪ ಗರಂ

ದಾವಣಗೆರೆ:  ಆರೋಗ್ಯ ಹದಗೆಟ್ಟರೆ ರೋಗಿಗಳು ಆರೋಗ್ಯ ಕೇಂದ್ರಗಳತ್ತ ದೌಡಾಯಿಸುವುದು ಸಾಮಾನ್ಯ. ಆದರೆ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಇರದಿದ್ದರೆ ಆಸ್ಪತ್ರೆಗೆ…

By Dinamaana Kannada News

Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ದಾವಣಗೆರೆ (Davanagere): ನಗರದ ಪಿ.ಬಿ.ರಸ್ತೆ ಬದಿಯಲ್ಲಿ ತಿಂಡಿ ಹೋಟೆಲ್ ನಡೆಸುತ್ತಿದ್ದ ಮಣಿಕಂಠ (34)ನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು…

By Dinamaana Kannada News

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿAದ ಫಾಸ್ಟ್ ಫುಡ್…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?