ದಾವಣಗೆರೆ : ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಗೊಂದಲಕ್ಕೆ ಒಳಗಾಗಾದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ.ಮ. ಕರೆಣ್ಣನವರ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವ ಜನಿಕ ಶಿಕ್ಷಣ ಇಲಾಖೆ, ಮತ್ತು ಜಿಲ್ಲಾ ರಕ್ಷಣಾ ಘಟಕ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯ್ದೆ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ ದೌರ್ಜನ್ಯಗಳನ್ನು ತಡೆಗಟ್ಟಲು ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಯುವಕ, ಯುವತಿಯರು ಯೌವನಕ್ಕೆ ಬಂದ ಮೇಲೆ ಮೊಬೈಲ್ ಟಿವಿ ಸೇರಿದಂತೆ ಸಾಮಾಜಿಕ ಜಾಲತಾಣಗಳಂತಹ ಪ್ರಭಾವದಿಂದ ಪ್ರೀತಿ ಪ್ರೇಮದಲ್ಲಿ ಬಿದ್ದು ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿದ್ದಾರೆ. ಹಾಗಾಗಿ ವಿದ್ಯಾಭ್ಯಾಸದ ಕಡೆಗೆ ಮಾತ್ರ ಗಮನ ಹರಿಸಬೇಕು, ಇಲ್ಲದಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುವುದಿಲ್ಲ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ದೇಶ, ಹೆಣ್ಣು ಮಕ್ಕಳನ್ನು ಯಾವುದೇ ಕಾರಣಕ್ಕೂ ದುರ್ಬಲ ಎಂದು ಭಾವಿಸಬಾರದು, ಹೆಣ್ಣು ಮಕ್ಕಳು ಮಾನಸಿಕವಾಗಿ ದೈಹಿಕವಾಗಿ ದೃಢವಾಗಿ ಇರಬೇಕೆಂದು ಈ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಸಮಾಜದಲ್ಲಿ ಅವರಿಗೆ ಎಲ್ಲಾ ರೀತಿಯಲ್ಲೂ ಸ್ಥಾನ ಮಾನಗಳು ಸಿಗುವಂತೆ ನೋಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ. ಪೋಕ್ಸೋ ಕಾನೂನು ಎಂದರೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ, ಭೂಮಿ ಹೆಣ್ಣು ಗಂಡು ಮೂಲದಿಂದ ಹುಟ್ಟಿದೆ. ಹೆಣ್ಣು ಇಲ್ಲದಿದ್ದರೆ ಜಗತ್ತು ನಡೆಯುವುದಿಲ್ಲ. ಹೆಣ್ಣು ಎಂದರೆ ನಿರ್ಲಕ್ಷ್ಯ ಮಾಡುವುದು ಭ್ರೂಣ ಹತ್ಯೆ ಮಾಡುವುದು ಸೇರಿದಂತೆ ಹಲವಾರು ತೊಂದರೆ ಆಗುತ್ತಿರುವುದನ್ನು ನಾವೆಲ್ಲರೂ ದಿನನಿತ್ಯ ನೋಡುತ್ತಿದ್ದು ಇದು ನಿಲ್ಲಬೇಕು ಎಂದರು.
Read also : ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ
10ನೇ ತರಗತಿ ಪರೀಕ್ಷೆ ಬರೆಯಲು ಸಿದ್ದತೆ: 9ನೇ ತರಗತಿಯಿಂದ ಪಿಯುಸಿಯವರೆಗಿನ ವಿದ್ಯಾರ್ಥಿಗಳಿಗೆ ತುಂಬಾ ಅವಶ್ಯಕವಾಗಿದ್ದು, ಓದುವುದು ಬಹಳ ಮುಖ್ಯವಾಗಿರುತ್ತದೆ. ಓದಿನ ಕಡೆಗೆ ಹೆಚ್ಚು ಗಮನ ಹರಿಸಿ ಪುಸ್ತಕಗಳನ್ನು ಮನಸ್ಸಿಗೆ ಅರ್ಥವಾಗುವ ರೀತಿ ಓದಬೇಕು. ಸರಿಯಾಗಿ ಓದಿ, ಸರಿಯಾಗಿ ಪುನರ್ ಮನನ ಮಾಡಬೇಕು, ನೀವು ಉನ್ನತ ಮಟ್ಟದ ಹುದ್ದೆ ತಲುಪಲು ಅದಕ್ಕೆ ತಕ್ಕಂತೆ ಓದಬೇಕು. ಪರೀಕ್ಷೆ ಯಲ್ಲಿ ಫೇಲ್ ಆದರೆ ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ಮೂರ್ಖತನ. ಸಮಯದ ನಿರ್ವಹಣೆ ತುಂಬಾ ಮುಖ್ಯವಾಗಿದ್ದು ಯಾವುದಕ್ಕೆ ಎಷ್ಟು ಸಮಯ ನಿಗಧಿ ಪಡಿಸಿಕೊಳ್ಳಬೇಕು ಎಂದು ನಿರ್ಧರಿಸಿಕೊಳ್ಳಬೇಕು.
ಪರೀಕ್ಷೆ ಸಮಯದಲ್ಲಿ ಮಕ್ಕಳು ಗಾಬರಿಯಾಗುವುದು ಸಾಮಾನ್ಯವಾಗಿದೆ. ಪರೀಕ್ಷೆ ಬರೆಯಲು ದೇಹ ಮತ್ತು ಬುದ್ದಿ ಎರಡನ್ನು ಕೇಂದ್ರೀಕರಿಸಿಕೊಳ್ಳಬೇಕು. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಓದಲು ಬರೆಯಲು ದಿನದ ಚಟುವಟಿಕೆಗಳನ್ನು ತಯಾರಿಸಿಕೊಳ್ಳಬೇಕು. ಉತ್ತಮ ಆಹಾರ ಸೇವಿಸಿ ಮನಸ್ಸನ್ನು ಕೇಂದ್ರೀಕರಿಸಿಕೊಳ್ಳಬೇಕು. ತಂಪು ಪಾನೀಯ, ಪೌಷ್ಠಿಕ ತರಕಾರಿ ಇರುವ ಆಹಾರವನ್ನು ಸೇವಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಕವಿತಾ, ಪೊಲೀಸ್ ಅಧಿಕಾರಿ ಶಿಲ್ಪ, ಅಮೃತ ವಿದ್ಯಾಲಯದ ಪ್ರಾಂಶುಪಾಲರಾದ ಪ್ರತಿಭಾ, ಗುರುಪ್ರಸಾದ್ ಹಾಗೂ ಅಮೃತ ವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
