Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ
ತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ

Dinamaana Kannada News
Last updated: February 2, 2026 4:02 pm
Dinamaana Kannada News
Share
Davanagere
SHARE

ದಾವಣಗೆರೆ : ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಗೊಂದಲಕ್ಕೆ ಒಳಗಾಗಾದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ  ಮಹಾವೀರ.ಮ. ಕರೆಣ್ಣನವರ ವಿದ್ಯಾರ್ಥಿಗಳಿಗೆ ತಿಳಿಸಿದರು.

ನಗರದ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವ ಜನಿಕ ಶಿಕ್ಷಣ ಇಲಾಖೆ, ಮತ್ತು ಜಿಲ್ಲಾ ರಕ್ಷಣಾ ಘಟಕ  ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯ್ದೆ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ  ದೌರ್ಜನ್ಯಗಳನ್ನು ತಡೆಗಟ್ಟಲು ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಯುವಕ, ಯುವತಿಯರು ಯೌವನಕ್ಕೆ ಬಂದ ಮೇಲೆ ಮೊಬೈಲ್ ಟಿವಿ ಸೇರಿದಂತೆ ಸಾಮಾಜಿಕ ಜಾಲತಾಣಗಳಂತಹ ಪ್ರಭಾವದಿಂದ ಪ್ರೀತಿ ಪ್ರೇಮದಲ್ಲಿ ಬಿದ್ದು ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿದ್ದಾರೆ. ಹಾಗಾಗಿ ವಿದ್ಯಾಭ್ಯಾಸದ ಕಡೆಗೆ ಮಾತ್ರ ಗಮನ ಹರಿಸಬೇಕು, ಇಲ್ಲದಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುವುದಿಲ್ಲ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ದೇಶ, ಹೆಣ್ಣು ಮಕ್ಕಳನ್ನು ಯಾವುದೇ ಕಾರಣಕ್ಕೂ ದುರ್ಬಲ ಎಂದು ಭಾವಿಸಬಾರದು, ಹೆಣ್ಣು ಮಕ್ಕಳು ಮಾನಸಿಕವಾಗಿ ದೈಹಿಕವಾಗಿ ದೃಢವಾಗಿ ಇರಬೇಕೆಂದು ಈ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಸಮಾಜದಲ್ಲಿ ಅವರಿಗೆ ಎಲ್ಲಾ ರೀತಿಯಲ್ಲೂ ಸ್ಥಾನ ಮಾನಗಳು ಸಿಗುವಂತೆ ನೋಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ. ಪೋಕ್ಸೋ ಕಾನೂನು ಎಂದರೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ, ಭೂಮಿ ಹೆಣ್ಣು ಗಂಡು ಮೂಲದಿಂದ ಹುಟ್ಟಿದೆ. ಹೆಣ್ಣು ಇಲ್ಲದಿದ್ದರೆ ಜಗತ್ತು ನಡೆಯುವುದಿಲ್ಲ. ಹೆಣ್ಣು ಎಂದರೆ ನಿರ್ಲಕ್ಷ್ಯ ಮಾಡುವುದು ಭ್ರೂಣ ಹತ್ಯೆ ಮಾಡುವುದು ಸೇರಿದಂತೆ ಹಲವಾರು ತೊಂದರೆ ಆಗುತ್ತಿರುವುದನ್ನು ನಾವೆಲ್ಲರೂ ದಿನನಿತ್ಯ ನೋಡುತ್ತಿದ್ದು ಇದು ನಿಲ್ಲಬೇಕು ಎಂದರು.

Read also : ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

10ನೇ ತರಗತಿ ಪರೀಕ್ಷೆ ಬರೆಯಲು ಸಿದ್ದತೆ: 9ನೇ ತರಗತಿಯಿಂದ ಪಿಯುಸಿಯವರೆಗಿನ ವಿದ್ಯಾರ್ಥಿಗಳಿಗೆ ತುಂಬಾ ಅವಶ್ಯಕವಾಗಿದ್ದು, ಓದುವುದು ಬಹಳ ಮುಖ್ಯವಾಗಿರುತ್ತದೆ. ಓದಿನ ಕಡೆಗೆ ಹೆಚ್ಚು ಗಮನ ಹರಿಸಿ ಪುಸ್ತಕಗಳನ್ನು ಮನಸ್ಸಿಗೆ ಅರ್ಥವಾಗುವ ರೀತಿ ಓದಬೇಕು. ಸರಿಯಾಗಿ ಓದಿ, ಸರಿಯಾಗಿ ಪುನರ್ ಮನನ ಮಾಡಬೇಕು, ನೀವು ಉನ್ನತ ಮಟ್ಟದ ಹುದ್ದೆ ತಲುಪಲು ಅದಕ್ಕೆ ತಕ್ಕಂತೆ ಓದಬೇಕು. ಪರೀಕ್ಷೆ ಯಲ್ಲಿ ಫೇಲ್ ಆದರೆ ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ಮೂರ್ಖತನ. ಸಮಯದ ನಿರ್ವಹಣೆ ತುಂಬಾ ಮುಖ್ಯವಾಗಿದ್ದು ಯಾವುದಕ್ಕೆ ಎಷ್ಟು ಸಮಯ ನಿಗಧಿ ಪಡಿಸಿಕೊಳ್ಳಬೇಕು ಎಂದು ನಿರ್ಧರಿಸಿಕೊಳ್ಳಬೇಕು‌.

ಪರೀಕ್ಷೆ ಸಮಯದಲ್ಲಿ ಮಕ್ಕಳು ಗಾಬರಿಯಾಗುವುದು ಸಾಮಾನ್ಯವಾಗಿದೆ. ಪರೀಕ್ಷೆ ಬರೆಯಲು ದೇಹ ಮತ್ತು ಬುದ್ದಿ ಎರಡನ್ನು ಕೇಂದ್ರೀಕರಿಸಿಕೊಳ್ಳಬೇಕು. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಓದಲು ಬರೆಯಲು ದಿನದ ಚಟುವಟಿಕೆಗಳನ್ನು ತಯಾರಿಸಿಕೊಳ್ಳಬೇಕು. ಉತ್ತಮ ಆಹಾರ ಸೇವಿಸಿ ಮನಸ್ಸನ್ನು ಕೇಂದ್ರೀಕರಿಸಿಕೊಳ್ಳಬೇಕು. ತಂಪು ಪಾನೀಯ, ಪೌಷ್ಠಿಕ ತರಕಾರಿ ಇರುವ ಆಹಾರವನ್ನು ಸೇವಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಕವಿತಾ, ಪೊಲೀಸ್ ಅಧಿಕಾರಿ ಶಿಲ್ಪ, ಅಮೃತ ವಿದ್ಯಾಲಯದ ಪ್ರಾಂಶುಪಾಲರಾದ ಪ್ರತಿಭಾ, ಗುರುಪ್ರಸಾದ್ ಹಾಗೂ ಅಮೃತ ವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂನ್ಯಾ.ಮಹಾವೀರ.ಮ.ಕರೆಣ್ಣನವರ
Share This Article
Twitter Email Copy Link Print
Previous Article Davanagere ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ
Next Article extended SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಯುವತಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಸಂತ ಚಿತ್ರಮಂದಿರದ…

By Dinamaana Kannada News

ದಾವಣಗೆರೆ: ಆಸ್ತಿ ತೆರಿಗೆ ಪಾವತಿಸಿ ಶೇ.05 ರಷ್ಟು ರಿಯಾಯಿತಿ ಪಡೆಯಿರಿ

ದಾವಣಗೆರೆ:  ಆಸ್ತಿ ಮಾಲೀಕರು 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಮತ್ತು ಇತರೆ ತೆರಿಗೆಗಳನ್ನು ಎಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ…

By Dinamaana Kannada News

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davanagere): ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?