ದಾವಣಗೆರೆ ಸೆ.28 (Davanagere ) : ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 29 ರಂದು ಜಿಲ್ಲೆಯ 45 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿರುವುದರಿಂದ ಪರೀಕ್ಷಾ ಅವ್ಯವಹಾರ ತಡೆಗೆ ಹಾಗೂ ಸುಗಮ ಪರೀಕ್ಷೆಗಾಗಿ 144 ಸೆಕ್ಷನ್ ಜಾರಿಗೊಳಿಸಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಪರೀಕ್ಷೆಯು ದಾವಣಗೆರೆ 35, ಹೊನ್ನಾಳಿ 3, ಹರಿಹರ 4 ಹಾಗೂ ಜಗಳೂರಿನ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.
Read also : Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ