Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ 
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ 

Dinamaana Kannada News
Last updated: February 15, 2026 8:29 am
Dinamaana Kannada News
Share
Davanagere
SHARE
ದಾವಣಗೆರೆ : ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ  ವಿಶೇಷ ಪರಿಷ್ಕರಣೆ ನಂತರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ  ಕಾರ್ಯಾಲಯ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗಳು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಫೆಬ್ರವರಿ 14 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪರಿಷ್ಕರಣೆ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಕುರಿತಂತೆ ಮಾಹಿತಿ ನೀಡಿ ಪ್ರಕಟಿಸಿದರು.
ಮತದಾರರ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ https://ceo.karnataka.gov.in/en ಹಾಗೂ ಪಟ್ಟಿಯನ್ನು ಮತ್ತು ಜಿಲ್ಲಾಧಿಕಾರಿಗಳ ವೆಬ್ಸೈಟ್ಗಳಲ್ಲಿ  ಮತದಾರರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳನ್ನು ಸರಿಯಾದ ಮಾಹಿತಿಯೊಂದಿಗೆ ಮತದಾರರ  ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂದು ಪರಿಶೀಲಿಸಕೊಳ್ಳಬಹುದು.
107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ, 1,14,165 ಪುರುಷ, 1,18,355 ಮಹಿಳೆಯರು ಹಾಗೂ 44 ತೃತೀಯಲಿಂಗ ಮತದಾರರು ಸೇರಿದಂತೆ ಒಟ್ಟು 2,32,564 ಮತದಾರರಿದ್ದಾರೆ, ಇದರಲ್ಲಿ 2204 ಯುವ ಮತದಾರರು (18-19 ವರ್ಷದವರು), 1 ವಿದೇಶಿ ಮತದಾರರು, 2542 ವಿಕಲಚೇತನ ಮತದಾರರು ಮತ್ತು 85 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟವರು 2157 ಮತದಾರಿದ್ದಾರೆ, ಒಟ್ಟು 217 ಮತಗಟ್ಟೆ ಗಳಿದ್ದು ಹೊಸದಾಗಿ 67 ಮತಗಟ್ಟೆ ಗಳನ್ನು ಸೇರ್ಪಡೆಗೊಳಿಸಿದ್ದು 24 ಮತಗಟ್ಟೆ ಗಳನ್ನು ಬದಲಾವಣೆ ಮಾಡಲಾಗಿ ಒಟ್ಟು ಈಗ 284 ಮತಗಟ್ಟೆಗಳಿವೆ   ಎಂದು ತಿಳಿಸಿದರು.
ಅರ್ಹ ಮತದಾರರು ಅರ್ಜಿಗಳನ್ನು ಸಲ್ಲಿಸಲು ತಮ್ಮ ಮೊಬೈಲ್ ಫೋನ್ನಲ್ಲಿ ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಬಹುದು. ಅಥವಾ https://voters.eci.gov.in/portal ನಲ್ಲಿಯೂ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ನಿಗದಿತ ನಮೂನೆಗಳಲ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಹೊಸ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ 6 ಅರ್ಜಿ, ವಿದೇಶಿ ಭಾರತೀಯ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ನಮೂನೆ 6ಎ ಅರ್ಜಿ, ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆ/ಹೆಸರು ತೆಗೆದುಹಾಕಲು ಆಕ್ಷೇಪಣೆ ಸಲ್ಲಿಸಲು ನಮೂನೆ 7 ನಮೂನೆ,  ನಿವಾಸ ಬದಲಾವಣೆ/ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿ ನಮೂದುಗಳ ತಿದ್ದುಪಡಿ/ಎಪಿಕ್ ಬದಲಾವಣೆ/ ಭಾವಚಿತ್ರ ಬದಲಾವಣೆ ಇತರೆ ತಿದ್ದುಪಡಿಗೆ ನಮೂನೆ 8 ರಲ್ಲಿ ಅರ್ಜಿ  ಸಲ್ಲಿಸಬೇಕು ಎಂದು ತಿಳಿಸಿದರು.
Read also : ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್
ಮತದಾರರ ಫೋಟೋ ಗುರುತಿನ ಚೀಟಿಗಳು ಮತ್ತು ಅರ್ಜಿಗಳ ಸಲ್ಲಿಕೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೊಂದಣಾಧಿಕಾರಿ, ಸಹಾಯಕ ಮತದಾರರ ನೊಂದಣಾಧಿಕಾರಿ ಮತ್ತು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು.  ಎಲ್ಲಾ ರಾಜಕೀಯ ಪಕ್ಷದವರು ಮತಗಟ್ಟೆ ಮಟ್ಟದ ಏಜೆಂಟರ್ಗಳನ್ನು ನೇಮಕ ಮಾಡಿ, ನೇಮಕ ಮಾಡಿದ ಪ್ರತಿಗಳನ್ನು ಈ ಪ್ರಾಧಿಕಾರಕ್ಕೆ ಸಲ್ಲಿಸುವುದು. ರಾಜಕೀಯ ಪಕ್ಷಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಂಡು ಮತದಾರರ ನೋಂದಣಿ ಮಾಡಿಸುವ ನಿಟ್ಟಿನಲ್ಲಿ ಹಾಗೂ ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಸಹಕರಿಸುವಂತೆ ತಿಳಿಸಿದರು.
ಈ ವೇಳೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್
Next Article Davanagere ಕಟ್ಟಡ ಮಾಲೀಕರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರಕ್ಕೆ 96 ರೂ ಕೋಟಿ ಪ್ರಸ್ತಾವನೆ : ಶಾಸಕ ಬಿ.ದೇವೇಂದ್ರಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Crime News : ಟಿಪ್ಪ‌ರ್ ಲಾರಿ (Tipper lorry) ಪಲ್ಟಿ : ಚಾಲಕ ಸಾವು

ದಾವಣಗೆರೆ (Davangere) :  ತಾಲ್ಲೂಕಿನ ಆವರಗೊಳ್ಳ ಗ್ರಾಮದಲ್ಲಿ  ಟಿಪ್ಪ‌ರ್ ಲಾರಿ ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಗದಗ…

By Dinamaana Kannada News

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ ಡೈರೆಕ್ಟರ್ ಜನರಲ್ ಇವರು ಹೆಚ್ಚಿನ ಸಂಖ್ಯೆಯ ಮಾಜಿ…

By Dinamaana Kannada News

ದಾವಣಗೆರೆ|ಆ.2 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ  : 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕಟ್ಟಡ ಮಾಲೀಕರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರಕ್ಕೆ 96 ರೂ ಕೋಟಿ ಪ್ರಸ್ತಾವನೆ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್

By Dinamaana Kannada News
Davanagere
ತಾಜಾ ಸುದ್ದಿಸಿನಿಮಾ

ಬರ್ಕತ್ ಅಲಿ ಕುಟುಂಬ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ : ನಟ ಪ್ರೇಮ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ಗೆ ಮುಸ್ಲಿಂ ಸಮಾಜ ಒಮ್ಮತದ ನಿರ್ಣಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?