Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: October 4, 2024 1:12 pm
Dinamaana Kannada News
Share
davanagere
davanagere
SHARE

ದಾವಣಗೆರೆ.ಅ.4,(Davanagere): ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಲೋಕಸಭಾ ಸದಸ್ಯರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ  ಸಂಯುಕ್ತಾಶ್ರಯದಲ್ಲಿ ವಿದ್ಯಾನಗರದಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತನ್ನ ಭವಿಷ್ಯದ ಗುರಿಯನ್ನಿಟ್ಟುಕೊಂಡು ಆಶಾವಾದಿಗಳಾಗಬೇಕು. ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡರೆ, ತನ್ನ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ. ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ, ಪೋಷಕ ಕರೊಂದಿಗೆ ಹಾಗೂ ಸಮಾಜದೊಂದಿಗೆ ಉತ್ತಮ ಭಾಂದವ್ಯವನ್ನು ಬೆಳೆಸಿಕೊಂಡು ಸಂಬಂಧಗಳ ಮಹತ್ವಗಳನ್ನು ಅರಿತು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಲಿಕೆಯ ಎಲ್ಲ ಹಂತಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿ ಎಂದು ಎನಿಸಿಕೊಳ್ಳಲು ಸಾಧ್ಯ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ವಿಷಯಗಳನ್ನು ನಿರ್ಲಕ್ಷ್ಯ ಮಾಡದೇ ಪ್ರತಿಯೊಂದು ವಿಷಯವು ಉಪಯುಕ್ತ ಎನ್ನುವ ಭಾವನೆಯೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಯತ್ನಿಸಬೇಕಿದೆ ಎಂದು ತಿಳಿಸಿ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿμï ಕಲಿಕೆ, ಕಂಪ್ಯೂಟರ್ ಜ್ಞಾನದ ಜೊತೆಗೆ ಶಿಸ್ತು ಬೆಳೆಸಿಕೊಂಡರೆ  ಮಾತ್ರ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಮಾತನಾಡಿ ವಿದ್ಯಾರ್ಥಿಗಳು ಏನು ಓದಬೇಕು, ಯಾವಾಗ ಓದಬೇಕು, ಏನ್ ಮಾಡಬೇಕು ಎಂಬ ಸ್ವಂತ ಚಿಂತನೆಗಳನ್ನು ರೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ತಂದೆ, ತಾಯಿಗಳು ಕಷ್ಟಪಟ್ಟು ದುಡಿದು ನಿಮಗೆ ವಿದ್ಯಾಭ್ಯಾಸ ಕಲಿಯಲು ಕಳುಹಿಸುತ್ತಿರುತ್ತಾರೆ. ಅದರ ಫಲವಾಗಿ ನೀವು ಅವರಿಗೆ ನಿಮ್ಮ ಸಾಧನೆಯ ಮೂಲಕ ಗೌರವ ತರಬೇಕು ಎಂದು ತಿಳಿಸಿದರು.

ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಈ ತರಬೇತಿಯು 90 ದಿನಗಳ ಕಾಲ ನಡೆಯಲಿದ್ದು. ಪ್ರತಿದಿನ 2 ಗಂಟೆಯಂತೆ ಐದು ದಿನ ತರಗತಿಗಳನ್ನು ನಡೆಸಲಾಗುತ್ತದೆ. ಜೊತೆಗೆ 19 ವರ್ಷ ಹಿಂದಿನ ಪ್ರಶ್ನೋತ್ತರಗಳನ್ನು ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಕಾಲೇಜಿನಲ್ಲಿರುವಂತಹ ಅಧ್ಯಾಪಕರು ಬೋರ್ಡ್ ಪರೀಕ್ಷೆ ಬಗ್ಗೆ ಹೆಚ್ಚು ಅಧ್ಯಯನ ಮಾಡಿಸುತ್ತಾರೆ, ಹಾಗೆಯೇ ಖಾಸಗಿ ಸಂಸ್ಥೆ ಅಧ್ಯಾಪಕರು ಸಿಇಟಿ ಮತ್ತು ನೀಟ್ ಪರೀಕ್ಷೆ ಬಗ್ಗೆ ಉಪನ್ಯಾಸ ನೀಡುತ್ತಾರೆ ಎಂದು ತಿಳಿಸಿದರು.

Read also : Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

ಜಿಲ್ಲಾ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ ಭವಿಷ್ಯ ನಿಮ್ಮ ಕೈಯಲ್ಲಿದೆ, ಆದ್ದರಿಂದ ಕಲಿಯುವ ಸಮಯದಲ್ಲಿ ಗಮನವಿಟ್ಟು ಶ್ರದ್ಧೆಯಿಂದ ಕಲಿತು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಿಗರೇಟ್, ತಂಬಾಕು ಇಂತಹ ದುಶ್ಚಟಗಳಿಂದ ದೂರವಿರಬೇಕು, ಕಾಲೇಜುಗಳಲ್ಲಿ ಯಾರಾದರೂ ಸಿಗರೇಟ್, ತಂಬಾಕು ಬಳಸುವುದು ಕಂಡುಬಂದಲ್ಲಿ ಅಂತವರ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಸಿಇಟಿ,  ನೀಟ್ ಬುಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಚಮನ್ ಸಾಬ್ , ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್,  ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕರಿಸಿದ್ದಪ್ಪ, ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಸಂಘದ ಅಧ್ಯಕ್ಷರಾದ ಶ್ರೀಧರ್, ಕಾರ್ಯದರ್ಶಿ ಡಾ.ಜಯಂತ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ ವಾಮದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯತ್ರಿ ಹಾಗೂ ವಿವಿಧ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ
Next Article Davanagere Davanagere crime | ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ : ಆರೋಪಿ ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere):-  ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ,…

By Dinamaana Kannada News

ದುರಂತ ಯುವನಾಯಕ ಎಂ.ಪಿ.ರವೀಂದ್ರ

ಒಂದು ರಾತ್ರಿಯಿಡೀ ರಾಜ್ಯ ರಾಜಕಾರಣದ ಒಳಸುಳಿಗಳನ್ನು ತೆರೆದಿಟ್ಟಿದ್ದರು.ಹೀಗೆ ಮಾತನಾಡುವಾಗ ತನ್ನ ತಂದೆ ಪ್ರಕಾಶರಿಗಾದ ಅನ್ಯಾಯದ ನೋವು ಅವರಲ್ಲಿತ್ತು. ಆ ಬಿಸಿಯಲ್ಲಿ…

By Dinamaana Kannada News

ವಕೀಲರು ಕೌಶಲ್ಯತೆ ವೃದ್ದಿಸಿಕೊಳ್ಳಬೇಕು : ಪ್ರೊ.ಡಾ.ನಟರಾಜ್

ದಾವಣಗೆರೆ: ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಬೆಳಸಿಕೊಂಡಾಗ ಮಾತ್ರ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಾ.ನಟರಾಜ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?