ದಾವಣಗೆರೆ : ರಾಜ್ಯ ಸರ್ಕಾರದಿಂದ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಉಚಿತವಾಗಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.50 ರಷ್ಟು (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಜುಲೈ 12 ರೊಳಗಾಗಿ ವೆಬ್‍ಸೈಟ್ https://nber-rehabcouncil.gov.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು(ತರಬೇತಿ) ಕಚೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್‍ನಗರ, ಮೈಸೂರು-570001, ದೂರವಾಣಿ ಸಂ:0821- 2491600, ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್-9113561620, ಟಿ.ಡಿ. ಮಂಜುನಾಥ – 9686762378 ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್ ತಿಳಿಸಿದ್ದಾರೆ.
Read also : ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ