ದಾವಣಗೆರೆ ಜ. 28 : ಪ್ರಸಕ್ತ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿಯ ಯುವ ಜನರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಉಚಿತ ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ 45 ದಿನಗಳ ಜಿಮ್ ತರಬೇತಿ ಶಿಬಿರವು ಫೆಬ್ರವರಿ 1 ರಿಂದ ಮಾರ್ಚ್ 17 ರವರೆಗೆ ಆಯೋಜಿಸಿದ್ದು, ಎಸ್.ಎಸ್.ಎಲ್ ಸಿ. ವಿದ್ಯಾರ್ಹತೆ ಹೊಂದಿರಬೇಕು.
Read also : ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ
ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಜನ್ಮದಿನಾಂಕದ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶಾಖೆ, ಕೇಂದ್ರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೃಪತುಂಗ ರಸ್ತೆ ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳ ಸಹಾಯಕ ನಿರ್ದೇಶಕರಾದ ರೇಣುಕಾ ತಿಳಿಸಿದ್ದಾರೆ.
