Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ
ತಾಜಾ ಸುದ್ದಿ

ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ

Dinamaana Kannada News
Last updated: March 26, 2024 5:49 pm
Dinamaana Kannada News
Share
G.S.T. Notice to carry out business transactions as per rules
ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಸೂಚನೆ
SHARE

ದಾವಣಗೆರೆ,ಮಾ.26

ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಜವಳಿ, ಚಿನ್ನಬೆಳ್ಳಿ, ಕಿಚನ್ ವಸ್ತುಗಳ ವ್ಯಾಪಾರಿಗಳು ಸೇರಿದಂತೆ ಟ್ರಾನ್ಸ್ ಪೋರ್ಟ್ ಮಾಲಿಕರು ನಿಯಮಬದ್ದವಾಗಿ ವಹಿವಾಟು ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಪಾಲನೆ ಮಾಡುವ ಮೂಲಕ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾದ ಚುನಾವಣೆ ನಡೆಸಲು ಎಲ್ಲಾ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಜವಳಿ, ಚಿನ್ನಬೆಳ್ಳಿ, ಸ್ಟೀಲ್ ಅಂಗಡಿ ವರ್ತಕರು, ಪೆಟ್ರೋಲ್ ಬಂಕ್, ಸಮುದಾಯ ಭವನ, ಹೋಟೆಲ್ ಮಾಲಿಕರು ಮತ್ತು ಸರಕು ಸಾಗಣೆ ವಾಹನಗಳ ಮಾಲಿಕರು ಹಾಗೂ ಮುದ್ರಣಾಲಯದ ಮಾಲಿಕರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿ.ಎಸ್.ಟಿ. ಬಿಲ್ ನೀಡುವುದು ಕಡ್ಡಾಯ

 

ಚುನಾವಣಾ ಸಂದರ್ಭದಲ್ಲಿ ಜನರಿಗೆ ಉಚಿತ ಕೊಡುಗೆ ನೀಡಲು ವಸ್ತುಗಳನ್ನು ಖರೀದಿ ಮಾಡುವ ಸಂಭವವಿರುತ್ತದೆ. ಸೀರೆ ಹಂಚಿಕೆ, ಕಿಚನ್ ವಸ್ತುಗಳ ಹಂಚಿಕೆ, ಬೆಳ್ಳಿ ಬಂಗಾರದ ಉಡುಗೊರೆ ನೀಡುವ ಸಂಭವಿದೆ. ಮಾಲಿಕರು ಯಾರು ಒಂದೇ ತರಹದ ವಸ್ತುಗಳನ್ನು ಖರೀದಿಸುವರು ಅಂತಹವರ ವಿವರವನ್ನು ನೀಡಬೇಕಾಗುತ್ತದೆ. ಯಾವುದೇ ವಸ್ತುಗಳನ್ನು ಖರೀದಿಸಿದರೂ ಜಿ.ಎಸ್.ಟಿ. ಬಿಲ್ ನೀಡುವುದು ಕಡ್ಡಾಯವಾಗಿದೆ.

ಯಾವುದೇ ಮದುವೆಯ ಸಮಾರಂಭಕ್ಕೆ ಜವಳಿ ಖರೀದಿಸಿದಲ್ಲಿ ಅದಕ್ಕೆ ಸಂಬಂಧಿಸಿದ ಜಿ.ಎಸ್.ಟಿ. ಬಿಲ್ ಇಟ್ಟುಕೊಳ್ಳಬೇಕಾಗುತ್ತದೆ. ಅಂಗಡಿ ಮಾಲಿಕರು ಆಗಮಿಸುವ ಗ್ರಾಹಕರಿಗೆ ಆನ್‍ಲೈನ್ ವ್ಯವಹಾರ ಮಾಡಲು ತಿಳಿಸಬೇಕು. ಯಾವುದೇ ಅಂಗಡಿಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಬಂದಾಗ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡು ಪರಿಶೀಲನೆಗೆ ಸಹಕಾರ ನೀಡಬೇಕಾಗುತ್ತದೆ. ನಿಯಮಬದ್ದವಾಗಿ ವ್ಯವಹಾರ ಮಾಡಲು ಯಾವುದೇ ಅಭ್ಯಂತರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಗದು ಸಾಗಣೆಗೆ ಅನುಮತಿ ಪಡೆಯಿರಿ

 

ಅಂಗಡಿಯಲ್ಲಿ ವ್ಯಾಪಾರ ಮಾಡಿದ ವೇಳೆ ಸ್ವೀಕರಿಸಲಾದ ನಗದನ್ನು ಬ್ಯಾಂಕ್‍ಗೆ ಹೋಗಿ ಜಮಾ ಮಾಡಲು ಹೋಗುವಾಗ ನಗದು ವಶಕ್ಕೆ ಪಡೆಯುತ್ತಾರೆ ಎಂದು ವರ್ತಕರು ಪ್ರಸ್ತಾಪಿಸಿದರು. ಇದಕ್ಕೆ ಜಿಲ್ಲಾಧಿಕಾರಿಯವರು ವಹಿವಾಟು ನಡೆಸುತ್ತಿರುವ ಬಗ್ಗೆ ಮತ್ತು ಹಣವನ್ನು ಸಾಗಣೆ ಮಾಡುತ್ತಿರುವ ಬಗ್ಗೆ ದಾಖಲೆಗಳ ಸಮೇತ ಸಂಬಂಧಿಸಿದ ಆಯಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಿ ವಹಿವಾಟು ನಡೆಸಬಹುದು.

ಈಗಾಗಲೇ ಧರ್ಮಸ್ಥಳ ಸಂಘದವರು ಹಣಕಾಸಿನ ವಹಿವಾಟು ನಡೆಸುತ್ತಿರುವ ಮತ್ತು ಸಂಗ್ರಹಿಸಲಾದ ನಗದನ್ನು ಬ್ಯಾಂಕ್‍ಗೆ ಕೊಂಡೊಯ್ದು ಜಮಾ ಮಾಡಲು ಅನುಮತಿ ನೀಡಲಾಗಿದೆ. ಅದೇ ರೀತಿ ಯಾವುದೇ ಟ್ರೇಡ್‍ನವರು ನಗದು ಸಾಗಣೆ ಬಗ್ಗೆ ಸೂಕ್ತ ದಾಖಲೆಗಳನ್ನಿಟ್ಟುಕೊಳ್ಳಬೇಕಾಗುತ್ತದೆ. ವಶಕ್ಕೆ ಪಡೆದ ಹಣದ ಪುನರ್ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಿಡ್ರೆಸ್ಸೆಲ್ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಚಿನ್ನ ಬೆಳ್ಳಿ ವ್ಯಾಪಾರಿಗಳು ವಿವರ ಸಲ್ಲಿಸಿ

 

ಚಿನ್ನ ಬೆಳ್ಳಿ ವ್ಯಾಪಾರಿಗಳು ಸಣ್ಣ ಸಣ್ಣ ವಸ್ತುಗಳನ್ನು ಹೆಚ್ಚಾಗಿ ಖರೀದಿ ಮಾಡುವವರ ವಿವರವನ್ನು ನೀಡಬೇಕು. ಯಾವುದೇ ಖರೀದಿ ಮಾಡಿದ್ದರೂ ಸಹ ಜಿ.ಎಸ್.ಟಿ. ಬಿಲ್ ನೀಡುವುದು ಕಡ್ಡಾಯವಾಗಿದೆ.

ಈ ವೇಳೆ ವರ್ತಕರು ಮಾತನಾಡಿ ಆಭರಣ ತಯಾರಿಸಲು ನೀಡಿದ್ದು ವಾಪಸ್ ಅಂಗಡಿಗೆ ನೀಡುವಾಗ ವಶಕ್ಕೆ ಪಡೆದು ಸೀಜ್ ಮಾಡಲಾಗಿತ್ತು, ಅದನ್ನು ಮೂರು ತಿಂಗಳ ನಂತರ ವಾಪಸ್ ನೀಡಲಾಯಿತು. ಇದರಿಂದ ಸಕಾಲದಲ್ಲಿ ಗ್ರಾಹಕರಿಗೆ ಆಭರಣ ನೀಡಲು ಸಾಧ್ಯವಾಗದೆ ಸಮಸ್ಯೆ ಎದುರಿಸಬೇಕಾಯಿತು ಎಂದಾಗ ಆಭರಣ ಸಿದ್ದಪಡಿಸಲು ನೀಡುವಾಗಲೂ ಅದಕ್ಕೆ ಸಂಬಂಧಿಸಿದ ರಸೀದಿಯನ್ನು ನೀಡಬೇಕಾಗುತ್ತದೆ. ರಸೀದಿ ನೀಡಿದಲ್ಲಿ ಯಾರು ಸಹ ವಶಕ್ಕೆ ಪಡೆಯುವುದಿಲ್ಲ ಎಂದು ಸಷ್ಟಪಡಿಸಿದರು.

ಕೂಪನ್ ವಹಿವಾಟು ನಡೆಸುವಂತಿಲ್ಲ

 

ಯಾವುದೇ ಹೋಟೆಲ್, ಅಂಗಡಿಗಳಲ್ಲಿ ಕೂಪನ್ ಮೂಲಕ ವಹಿವಾಟು ನಡೆಸುವಂತಿಲ್ಲ. ಯಾವುದೇ ಹೋಟೆಲ್‍ನಲ್ಲಿ ಯಾರು ವಾಸ್ತವ್ಯ ಹೂಡುವರು ಅವರೇ ಬಿಲ್ ಪಾವತಿಸಬೇಕು. ಮತ್ತು ಯಾವುದೇ ಹೋಟೆಲ್, ಅಂಗಡಿ, ಪೆಟ್ರೋಲ್ ಬಂಕ್‍ಗಳಲ್ಲಿ ಕೂಪನ್ ಆಧರಿಸಿ ಯಾವುದೇ ವಸ್ತುಗಳು, ಉಪಹಾರ, ಊಟ ನೀಡುವಂತಿಲ್ಲ, ಮತ್ತು ಸಮುದಾಯ ಭವನಗಳಲ್ಲಿ ರಾಜಕೀಯ ಉದ್ದೇಶಕ್ಕೆ ನೀಡುವಾಗ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ ಎಂದರು.

 

ಮುದ್ರಣ ಮಾಲಿಕರು ಡಿಕ್ಲರೇಷನ್ ಸಲ್ಲಿಕೆ ಕಡ್ಡಾಯ

ಕರಪತ್ರ ಮುದ್ರಣ ಮಾಲಿಕರು ನಿಯಮ 127 ಎ ಅನ್ವಯ ಯಾವುದೇ ಕರಪತ್ರ ಮುದ್ರಣ ಮಾಡಿದ 3 ದಿನಗಳೊಳಗಾಗಿ ಜಿಲ್ಲಾ ದಂಡಾಧಿಕಾರಿಗೆ ಮುದ್ರಿತ ಪ್ರತಿಗಳೊಂದಿಗೆ ಅಪೆಂಡಿಕ್ಸ್.ಬಿ ಅನ್ವಯ ಸಲ್ಲಿಸಬೇಕು. ಆಯಾ ತಾಲ್ಲೂಕುಗಳಲ್ಲಿ ಸಹಾಯಕ ಚುನಾವಣಾಧಿಕಾರಿಗಳಿದ್ದು ಅಲ್ಲಿಯು ಸಲ್ಲಿಸಬಹುದಾಗಿದೆ ಎಂದ ಅವರು ಮತದಾನ ಮುಕ್ತಾಯದ 48 ಗಂಟೆಗಳ ಮುಂಚಿನ ಅವಧಿಯಲ್ಲಿ ಮುದ್ರಣ ಮಾಧ್ಯಮದಲ್ಲಿ ಜಾಹಿರಾತು ನೀಡಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯಾಪಾರ ವಹಿವಾಟಿನಲ್ಲಿ ಯಾವುದೇ ಉಲ್ಲಂಘನೆಯಾಗಬಾರದು. ಗೋಡೌನ್‍ಗಳಲ್ಲಿ ದಾಸ್ತಾನಿರುವ ವಸ್ತುಗಳಿಗೂ ನಿಮ್ಮಲ್ಲಿರುವ ಬಿಲ್‍ಗಳಿಗೂ ತಾಳೆಯಾಗುವಂತಿರಬೇಕು.

ಕೆಲವು ಸಂದರ್ಭದಲ್ಲಿ ದಾಸ್ತಾನು ಮಳಿಗೆ ಪರಿಶೀಲನೆ ಮಾಡುವ ಸಂದರ್ಭ ಬಂದಾಗ ದಾಖಲೆಗಳನ್ನಿಟ್ಟುಕೊಳ್ಳಬೇಕಾಗುತ್ತದೆ. ರೂ.50 ಸಾವಿರಕ್ಕೂ ಹೆಚ್ಚು ನಗದು ತೆಗೆದುಕೊಂಡು ಹೋಗುವಂತಿಲ್ಲ. ಹೋದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ ಎಂದರು.

ಈ ವೇಳೆ ವರ್ತಕರು ಮಾತನಾಡಿ ವ್ಯಾಪಾರ ಮಾಡಲು ಬೇರೆ ಕಡೆ ಹೋದಾಗ ನಗದು ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದಾಗ ಈ ಬಗ್ಗೆ ಸಹಾಯಕ ಚುನಾವಣಾಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಬಹುದಾಗಿದೆ ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಿ.ಎಸ್.ಟಿ. ನಿಯಮಗಳ ಬಗ್ಗೆ ವಿವರ ನೀಡಿದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ ಎಂ.ಸಂತೋಷ್, ಚುನಾವಣಾ ವೆಚ್ಚದ ಮೇಲ್ವಿಚಾರಣಾ ಸಮಿತಿ ನೋಡಲ್ ಅಧಿಕಾರಿ ಗಿರೀಶ್.ಹೆಚ್, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಮಂಜುನಾಥ್ ಮತ್ತು ಜವಳಿ ಅಂಗಡಿ ಮಾಲಿಕರು, ಬೆಳ್ಳಿ, ಬಂಗಾರದ ಅಂಗಡಿ, ಪೆಟ್ರೋಲ್ ಬಂಕ್, ಮುದ್ರಣಾಲಯದ ಮಾಲಿಕರು, ಟ್ರಾನ್ಸ್ ಪೋರ್ಟ್ ಮಾಲಿಕರು ಉಪಸ್ಥಿತರಿದ್ದರು.

TAGGED:dinamaana.com.davanagere newsDinamana.comG.S.T. DC instruction to carry out business transactions as per rules .ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Difference in e-waybill issuance 400 water coolers in possession ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ 400 ವಾಟರ್ ಕೂಲರ್‌ ಗಳು ವಶಕ್ಕೆ
Next Article National Award ಯೋಗ ಸಾಧಕಿ ಲಾವಣ್ಯ ಶ್ರೀಧರ್‌ಗೆ ‘ಅಹಲ್ಯಬಾಯಿ ಹೋಳ್ಕರ್’ ರಾಷ್ಟ್ರೀಯ ಪ್ರಶಸ್ತಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   

ದಾವಣಗೆರೆ.ಮೇ.2  :  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ…

By Dinamaana Kannada News

JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ದಾವಣಗೆರೆ  (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ವತಿಯಿಂದ ಡಿಸೆಂಬರ್ : 07-12-2024 ಶನಿವಾರ…

By Dinamaana Kannada News

Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ಹರಿಹರ (Davanagere) : ತಾಲ್ಲೂಕಿನ ಕೆ.ಬೇವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಡ್ಲೆಗೊಂದಿ ಗ್ರಾಮದ ವಸತಿ ರಹಿತ ಮಾದಿಗ ಹಾಗೂ ಹಿಂದುಳಿದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?