ದಾವಣಗೆರೆ (Davanagere): ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಪ್ರಯತ್ನ ಮತ್ತು ಅಹಿಂದ ವರ್ಗದ ಮತಗಳು ವಿಭಜನೆಯಾಗಂದತೆ ನೋಡಿಕೊಂಡಿರುವ ಪ್ರತಿಫಲ ಎಂದು ಕರ್ನಾಟಕ ರಾಜ್ಯ ವಕ್ಪ್ ಪರಿಷತ್ ಸದಸ್ಯ ಘನಿತಾಹೀರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಜ್ಞಾವಂತ ಮತದಾರರು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳ ಜಾರಿಗೆ ತಂದಿರುವ ಗ್ಯಾರಂಟಿಗಳ ಯೋಜನೆಗೆ ರಾಜ್ಯ ಮತದಾರರು ಮನ್ನಣೆ ನೀಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಅಹಿಂದ ಮತದಾರರು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಜಾತಿ ಗಣತಿ ಜಾರಿಗೆ ತರಬೇಕು ಕಾಂತರಾಜ ವರದಿ ಜಾರಿಗೆ ತರಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ಮತದಾರರು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ವಕ್ಪ್ ಕಾಯಿದೆ ಬಗ್ಗೆ ತಪ್ಪು ಮಾಹಿತಿಗಳನ್ನು ನೀಡುತ್ತಾ ರಾಜ್ಯದ ರೈತರನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದೆ. ಈ ಫಲಿತಾಂಶ ಬಿಜೆಪಿಗೆ ಬಹಳ ಮುಜುಗರ ಉಂಟು ಮಾಡಿದೆ ಎಂದು ಹೇಳಿದ್ದಾರೆ. ಜಾತಿ ಗಣತಿ ಬಹಿರಂಗದಿಂದ ತುಳಿತಕ್ಕೆ ಒಳಗಾದ ಸಮುದಾಯ ಕಾಂಗ್ರೆಸ್ ಪಕ್ಷದ ಪರ ನಿಲ್ಲಲಿದೆ ಎಂದರು.
Read also | Davanagere | ಪತ್ನಿ ಕೊಲೆ ಪ್ರಕರಣ : ಗಂಡನಿಗೆ ಜೀವಾವಧಿ ಶಿಕ್ಷೆ