ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಥಮ ಆದ್ಯತೆಯಲ್ಲಿ ಅವಕಾಶ ನೀಡಬೇಕು ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ದಕ್ಷಿಣದಲ್ಲೂ ಹಾಗೆಯೇ ಆಗಲಿ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡಲಿ. ಎಐಎಂಐಎಂ ದಾವಣಗೆರೆ ದಕ್ಷಿಣದಲ್ಲಿ ಶಾಕ್ ಅನ್ನೋದಕ್ಕೆ ಇದು ಹೈದರಾಬಾದ್ ಅಲ್ಲ ಎಂದರು.
Read also : ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ
ಪಂಚ ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿರುವುದು ಸತ್ಯ. ಅದನ್ನೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಸರ್ಕಾರಕ್ಕೆ ಹೊರೆಯೆಂಬ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನೇನೂ ನಮ್ಮ ಸರ್ಕಾರ ನಿಲ್ಲಿಸಲ್ಲವಲ್ಲ. 52 ಸಾವಿರ ಕೋಟಿ ರೂ. ಹಣವೆಂದರೆ ಸಣ್ಣ ಮೊತ್ತವಲ್ಲ. ಶರಣು ಸಲಗಾರ ಗ್ಯಾರಂಟಿ ಬೇಡ ಅಂತೆಲ್ಲ ಮಾತನಾಡಿದ್ದಾರೆ. ಸಲಗಾರ ತಮ್ಮ ಕ್ಷೇತ್ರದ ಜನರಿಗೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಅರ್ಜಿ ಹಾಕಲಿ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತೇವೆ ಎಂದು ಅವರು ನುಡಿದರು.
