ದಾವಣಗೆರೆ (Davanagere): ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಶನಿವಾರ 19 ಮತ್ತು 20ನೇ ಪದವಿ ಪ್ರದಾನ ಸಮಾರಂಭದಲ್ಲಿ 2022-23 ಹಾಗೂ 2023-24ನೇ ಸಾಲಿನ ಸೇರಿ ಒಟ್ಟು 1061 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮತ್ತು ಪಿಹೆಚ್ ಡಿಯಿಂದ 6 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
19ನೇ ಪದವಿ ಪ್ರದಾನ : ಪಿಹೆಚ್ ಡಿಯಿಂದ ನಾಲ್ವರು ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಹಾಗೂ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಬಯೋಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಂಬಿಎ ಸೇರಿದಂತೆ ಈ 7 ವಿಭಾಗಗಳಿಂದ 2022-23ನೇ ಸಾಲಿನ ಒಟ್ಟು 495 ವಿದ್ಯಾರ್ಥಿಗಳಿಗೆ ಜಿಎಂ ವಿಶ್ವವಿದ್ಯಾಲಯದ ಕುಲಪತಿಗಳಾದ ಎಸ್.ಆರ್. ಶಂಕಪಾಲ್ ಪದವಿ ಪ್ರದಾನ ಮಾಡಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್.ಆರ್. ಶಂಕಪಾಲ್, ವಿದ್ಯಾರ್ಥಿಗಳು ಜ್ಞಾನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನಿಮಗೆ ಎಲ್ಲ ತರಹ ಪೂರಕ ಸವಲತ್ತುಗಳ ನೀಡಲಾಗಿದೆ. ಕಾಲೇಜು, ಉದ್ಯೋಗ, ವೈವಾಹಿಕ ಬದುಕು ಹೀಗೆ ಜೀವನದ ಪ್ರತಿಯೊಂದು ಹಂತದಲ್ಲೂ ಸಣ್ಣ ಪುಟ್ಟ ಸಮಸ್ಯೆ, ಸವಾಲುಗಳು ಎದುರಾಗುವುದು ಸಹಜ. ಹಾಗಾಗಿ ನೀವು ವಿದ್ಯಾರ್ಥಿ ಹಂತದಲ್ಲಿ ಬರುವ ಸವಾಲು, ಸಮಸ್ಯೆಗಳ ಮೀರಿ ಜ್ಞಾನ ಮತ್ತು ಕೌಶಲ್ಯವನ್ನು ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಬೇಕು ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಶ್ರೀಶೈಲ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಜಿ.ಎಂ. ಪ್ರಸನ್ನ ಕುಮಾರ್ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಬಿ. ಬಕ್ಕಪ್ಪ, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ. ಕೆ. ದಿವ್ಯಾನಂದ, ಕುಲಸಚಿವರಾದ ಡಾ. ಬಿ.ಎಸ್. ಸುನಿಲ್ ಕುಮಾರ್, ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪೆÇ್ರಫೇಸರ್ ಜೆ. ಪ್ರವೀಣ್ ಸ್ವಾಗತಿಸಿದರು.
20ನೇ ಪದವಿ ಪ್ರದಾನ : ಪಿಹೆಚ್ ಡಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಹಾಗೂ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಿಷನ್ ಲನಿರ್ಂಗ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಬಯೋಟೆಕ್ನಾಲಜಿ, ಸಿವಿಲ್ ಇಂಜಿ
ನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಂಬಿಎ ಸೇರಿದಂತೆ ಈ 8 ವಿಭಾಗಗಳಿಂದ 2023-24ನೇ ಸಾಲಿನ ಒಟ್ಟು 566 ವಿದ್ಯಾರ್ಥಿಗಳಿಗೆ ಜಿಎಂ ವಿಶ್ವವಿದ್ಯಾಲಯದ ಸಹ ಕುಲಪತಿಗಳಾದ ಡಾ. ಎಚ್.ಡಿ. ಮಹೇಶಪ್ಪ ಪದವಿ ಪ್ರದಾನ ಮಾಡಿದರು.
ಡಾ. ಎಚ್.ಡಿ. ಮಹೇಶಪ್ಪ ಮಾತನಾಡಿ, ಪದವಿ ಪಡೆಯುವ ತನಕ ಜೀವನದ ಪ್ರಯತ್ನದ ಒಂದು ಘಟ್ಟವಾದರೆ ಪಡೆದ ನಂತರ ಮಹತ್ವದ ಜವಾಬ್ದಾರಿ ನಿಮ್ಮ ಮೇಲಿರಲಿದ್ದು, ಓದ್ಯೋಗ ಕ್ಷೇತ್ರ ಮತ್ತು ಸಮಾಜದ ಉದ್ದಾರಕಾರು ನೀವಾಗಬೇಕು. ಈ ಎರಡು ಕ್ಷೇತ್ರಗಳ ಅಗತ್ಯತೆಗಳು, ಬೇಡಿಕೆಗಳ ಬಗ್ಗೆ ಅರಿವು ನಿಮ್ಮಲ್ಲಿರಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರಾದ ಡಾ. ಬಿ.ಎಸ್. ಸುನಿಲ್ ಕುಮಾರ್, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಬಿ. ಬಕ್ಕಪ್ಪ, ಆಡಳಿತ ಮಂಡಳಿ ಸದಸ್ಯರಾದ ಡಾ. ಕೆ. ದಿವ್ಯಾನಂದ, ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸ್ವಾಗತಿಸಿದರು.
Read also : ಸಮಾಜದ ಅಭಿವೃದ್ಧಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ : ಅಜಯಕುಮಾರ್