ದಾವಣಗೆರೆ (Davanagere ) : ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಇಂಟ್ರಯಿಂಜ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಎಂಬಿಎ ವಿಭಾಗದ ಸಲಹೆಗಾರರಾದ ಡಾ. ಬಕ್ಕಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಕೌಶಲ್ಯ ಮತ್ತು ಜ್ಞಾನದೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೇಕಾದ ಎಲ್ಲಾ ರೀತಿಯ ತರಬೇತಿ ನೀಡಿ ಕೈಗಾರಿಕೆಗಳಿಗೆ ತಕ್ಕಂತೆ ತಯಾರು ಮಾಡುವ ಜವಾಬ್ದಾರಿಯನ್ನು ಹೊಂದಿದ್ದೇವೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ. ಆರ್ ತಿಳಿಸಿದರು.
Read also : Davanagere Police Public School | ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ಕೊಡಿ : ಡಿವೈಎಸ್ಪಿ ಪ್ರಕಾಶ್
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಶ್ರೀ ಜಿ.ಎಂ. ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈ. ಯು ಸುಭಾಷ್ ಚಂದ್ರ , ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂ. ಬಿ, ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ್ ಪಿ. ಎಸ್, ವಿಭಾಗದ ಪ್ಲೇಸ್ಮೆಂಟ್, ಸಂಯೋಜಕರಾದ ಪ್ರೊ. . ವಿನಯ್, ಪ್ರಾಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.