ದಾವಣಗೆರೆ : ನಗರದ ಜಿ.ಎಂ ವಿಶ್ವವಿದ್ಯಾಲಯದ ಮೊದಲನೇ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಮೂರು ದಿನಗಳ ಜೀವನ ಕೌಶಲ್ಯಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ. ಆರ್, ಪುಣೆ ಮೂಲದ ತರಬೇತಿ ಸಂಸ್ಥೆಯಾದ ಜಿ ಟಿ ಟಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೊದಲನೇ ವರ್ಷದಿಂದಲೇ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಕೌಶಲ್ಯ ಅಭಿವೃದ್ಧಿ ತರಬೇತಿಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಹಾಗೂ ಮುಂಬರುವ ಕಂಪನಿಗಳ ಸಂದರ್ಶನ ಪ್ರಕ್ರಿಯೆಗೆ ಅನುಕೂಲಕರ ವಾಗುವಂತೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಮೂರು ದಿನಗಳ ತರಬೇತಿ ಕಾರ್ಯಕ್ರಮವು ೧ ನೇ ವರ್ಷದ ಎಂಜಿನಿಯರಿAಗ್ ವಿದ್ಯಾರ್ಥಿಗಳನ್ನು ಅವರ ಸಮಗ್ರ ಅಭಿವೃದ್ಧಿ ಮತ್ತು ವೃತ್ತಿಪರ ಜಗತ್ತಿನಲ್ಲಿ ಯಶಸ್ವಿ ಪರಿವರ್ತನೆಗೆ ಅಗತ್ಯವಾದ ಜೀವನ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿರುವ ವೈವಿಧ್ಯಮಯ ಕಾರ್ಯಾಗಾರಗಳು, ಸಂವಾದಾತ್ಮಕ ಅವಧಿಗಳು ಮತ್ತು ಪ್ರಾಯೋಗಿಕ ಚಟುವಟಿಕೆಗಳನ್ನು ಒಳಗೊಂಡಿದೆ ಎಂದು ಜಿ ಎಂ ವಿಶ್ವವಿದ್ಯಾಲಯದ ಡೀನ್ ಡಾ. ಪ್ರಕಾಶ್ ಎಸ್. ವಿ ತಿಳಿಸಿದರು.
ಸಮಾರಂಭದಲ್ಲಿ ಜಿ ಟಿ ಟಿ ಫೌಂಡೇಶನ್ ತರಬೇತಿ ಸಂಸ್ಥೆಯ ತರಬೇತುದಾರರಾದ ದ್ರುವ ದಾಸ್ ಬಿನಾನಿ, ಅನಿತಾ ರಾಜ್ ಎಂ, ದಾಮೋದರ್ ರಾವ್ ಎಚ್. ಕೆ ಮತ್ತು ಆಧಿಕೇಶವ ಪ್ರಕಾಶ್ ಕೆ. ಎ ಹಾಗೂ ಜಿ ಎಂ ಯು ಅಧ್ಯಾಪಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.