ದಾವಣಗೆರೆ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಅವರು ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮತದಾರರ ಪ್ರತಿಜ್ಞಾವಿಧಿ ಭೋಧಿಸಿದರು.
ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಎಲ್ಲರೂ ಮತದಾನ ಮಾಡುವುದರಿಂದ ಚುನಾವಣಾ ಫಲಿತಾಂಶದ ಗುಣಮಟ್ಟ ಹೆಚ್ಚಿರುತ್ತದೆ ಮತ್ತು ನಮ್ಮ ಹಕ್ಕನ್ನು ಚಲಾಯಿಸಿದಂತಾಗುತ್ತದೆ. ಆದ್ದರಿಂದ ಮತದಾರರಾದ ಎಲ್ಲರೂ ಮತದಾನದಲ್ಲಿ ಭಾಗವಹಿಸುವ ಮೂಲಕ ಚುನಾವಣಾ ಹಬ್ಬದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.
ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 400 ತರಬೇತುದಾರರು ಜಾಥಾದಲ್ಲಿ ಭಾಗವಹಿಸಿದ್ದರು. ಜಾಥಾವು ಐಟಿಐನಿಂದ ಪ್ರಾರಂಭಗೊಂಡು ವಿದ್ಯಾನಗರದ ಬ್ಯಾಂಕ್ ಆಫ್ ಬರೋಡ ಸರ್ಕಲ್, ವಿದ್ಯಾನಗರದ ಪಾರ್ಕ್ ಮುಖಾಂತರ ಮೋರ್ ಶಾಪ್, ಹದಡಿ ರಸ್ತೆಯಿಂದ ವಾಪಾಸ್ ಐಟಿಐ ಕಾಲೇಜಿನಲ್ಲಿ ಮುಕ್ತಾಯಗೊಂಡಿತು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಪಾಲಿಕೆ ಆಯುಕ್ತರಾದ ರೇಣುಕಾ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರಾದ ಏಕನಾಥ ಎನ್ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.