Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: December 25, 2025 4:35 am
Dinamaana Kannada News
Share
Davanagere
SHARE
ದಾವಣಗೆರೆ : ಮ್ಯಾನ್ಯುಯಲ್ ಸ್ಕಾವೇಂಜರ್ ಸಫಾಯಿ ಕರ್ಮಚಾರಿ ಮಕ್ಕಳಿಗೆ ಇನ್ನು ಮುಂದೆ ವಿದ್ಯಾಭ್ಯಾಸಕ್ಕೆ ಅಗತ್ಯವಿರುವಷ್ಟು ಅನುದಾನವನ್ನು ಮೀಸಲಿಡುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೇಂಜರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ -2013 ರ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮ್ಯಾನ್ಯುಯಲ್ ಸ್ಕಾವೇಂಜರ್ ಮತ್ತು ಸಫಾಯಿ ಕರ್ಮಚಾರಿ ಮಕ್ಕಳ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಅಗತ್ಯವಿರುವ ಲ್ಯಾಪ್‍ಟಾಪ್, ಟ್ಯಾಬ್, ವಿದ್ಯಾರ್ಥಿವೇತನ ನೀಡಲು ಮುಂದಾಗಬೇಕು. ಅದರಿಂದ ಆ ಪೀಳಿಗೆಗೆ ಸುಶಿಕ್ಷಿತರಾಗಿ ತಮ್ಮ ಮನೆ ಹಾಗೂ ಸಮುದಾಯದ ಜವಾಬ್ದಾರಿಯನ್ನು ನಿಬಾಯಿಸಬಲ್ಲರು. ಆದ್ದರಿಂದ ವಿವಿಧ ಅಭಿವೃದ್ಧಿ ನಿಗಮಗಳಡಿ  ಸಿಗುವ ಅನುದಾನದಡಿ ವಿದ್ಯಾಭ್ಯಾಸಕ್ಕನುಗುಣವಾಗಿ ಶಿಷ್ಯವೇತನ, ಉಚಿತವಾಗಿ ಟ್ಯಾಬ್ ಮತ್ತು ಲ್ಯಾಪ್ ಟಾಪ್‍ಗಳನ್ನು ನೀಡಲು ಅಗತ್ಯವಿರುವಷ್ಟು ಅನುದಾನವನ್ನು ಮೀಸಲೀಡುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 388 ಮ್ಯಾನ್ಯುಯಲ್ ಸ್ಕಾವೇಂಜರ್‍ಗಳಿದ್ದು ಅವರಲ್ಲಿ 372 ಜನರಿಗೆ ಗುರುತಿನ ಚೀಟಿ ನೀಡಲಾಗಿದೆ. ಉಳಿದ 16 ರಲ್ಲಿ 4 ಜನ ಮೃತಪಟ್ಟಿದ್ದು,  12 ಜನರಿಗೆ ಗುರುತಿನ ಚೀಟಿ ನೀಡಲು ಪರಿಶೀಲನೆ ಮಾಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ  388 ಮ್ಯಾನ್ಯುಯಲ್ ಸ್ಕಾವೇಂಜರ್‍ಗಳಲ್ಲಿ 298 ಜನರಿಗೆ ನಿವೇಶನ ಇರುವುದಿಲ್ಲ. ಆದುದರಿಂದ ನಿವೇಶನ ಹಂಚಿಕೆ ಮಾಡಲು ಅಗತ್ಯ ಜಮೀನು ಖರೀದಿಗಾಗಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ದೇವರಾಜ್ ಅರಸ್ ವಸತಿ ಯೋಜನೆಯಡಿ ಆರ್.ಜಿ.ಆರ್., ಹೆಚ್.ಸಿ.ಎಲ್ ರವರಿಂದ 59 ಮನೆಗಳು ಗುರಿ ಮಂಜೂರಾಗಿರುತ್ತದೆ. ಅದರಲ್ಲಿ 16 ಫಲಾನುಭವಿಗಳ ಪಟ್ಟಿಗೆ ಅನುಮೋದನೆ ಪಡೆಯಲಾಗಿರುತ್ತದೆ. ಬಾಕಿ ಉಳಿದ 43 ಫಲಾನುಭವಿಗಳು ವಿವಿದ ಕಾರಣಗಳಿಂದ ಅಗತ್ಯ ದಾಖಲಾತಿಗಳನ್ನು ನೀಡದೇ ಇರುವುದರಿಂದ ಅನುಮೋದನೆ ನೀಡಲು ಸಾಧ್ಯವಾಗಿರುವುದಿಲ್ಲವೆಂದು ಯೋಜನಾ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
Read also : ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಹೊರಗುತ್ತಿಗೆ ಅಥವಾ ನೇರ ನೇಮಕಾತಿ ಮಾಡುವ ಸಂದರ್ಭದಲ್ಲಿ ಮ್ಯಾನ್ಯುಯಲ್ ಸ್ಕಾವೇಂಜರ್‍ಗಳ ಕುಟುಂಬದ ಸದಸ್ಯರಿಗೆ ಮೀಸಲಾತಿಯನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಮಾಡಲಾಗುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಮಕ್ಕಳಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯದ್ಯಾಂತ ಗ್ರಂಥಾಲಯಗಳನ್ನು ತೆರೆಯಲು 3 ಕೋಟಿಗಳನ್ನು ಮೀಸಲಿಡಲಾಗುವುದು. ಅಗತ್ಯವಿರುವ ಕಡೆ  ಗ್ರಂಥಾಲಯಗಳನ್ನು ತೆರೆಯಲು ಕ್ರಮವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಯೋಜನೆಯಡಿ ಕಾರು ಖರೀದಿಸಲು ಧನಸಹಾಯ ಮಂಜೂರಾಗಿದ್ದು ಕಾರು ಖರೀದಿಸಲು ಹೆಚ್ಚಿನ ಮೊತ್ತವನ್ನು ಸಾಲ ಪಡೆಯಲು  ಬ್ಯಾಂಕ್‍ಗಳು ನೀರಾಸಕ್ತಿ ತೊರುತ್ತಿವೆ. ಆದುದರಿಂದ ಫಲಾನುಭವಿಗಳಿಗೆ ಕಾರು ಖರೀದಿಸಲು ಬ್ಯಾಂಕ್ ಗಳಿಗೆ ಸೂಚನೆ ನೀಡುವಂತೆ ಸಮಿತಿ ಸದಸ್ಯರು ಮನವಿ ಮಾಡಿದರು.
ಬ್ಯಾಂಕ್‍ಗಳು ಅವುಗಳ ನಿಯಮಗಳಂತೆ ಕಾರ್ಯ ನಿರ್ವಹಿಸುತ್ತವೆ ಬ್ಯಾಂಕ್ ನಿಯಮಗಳಿಗೆ ವಿನಾಯಿತಿ ಇರುವುದಿಲ್ಲ. ಆದಾಗ್ಯೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಮ್ಯಾನ್ಯಯಲ್ ಸ್ಕ್ಯಾವೇಂಜರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ -2013 ರ ಅನುಷ್ಠಾನ ಸಮಿತಿ ಸದಸ್ಯರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Next Article Davanagere ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.13 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ…

By Dinamaana Kannada News

Crime news|ಅಮಲು ಸಿರಫ್ ಮಾರಾಟ:ಐವರ ಬಂಧನ

ದಾವಣಗೆರೆ : ಅಮಲು ಬರುವ ಸಿರಫ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 5 ಜನ ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ ,…

By Dinamaana Kannada News

Davanagere | ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.24  (DAVANAGERE) :   ದಾವಣಗೆರೆ ಉಪವಿಭಾಗದ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು(ದೌರ್ಜನ್ಯ ಮತ್ತು ನಿಯಂತ್ರಣ) ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?