Kannada News | Dinamaana.com | 25-05-2024
ಹರಿಹರ : ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರಾದ ಮಾಜಿ ಸಚಿವ ಎಚ್.ಆಂಜನೇಯಗೆ ವಿಧಾನಪರಿಷತ್ತಿಗೆ ಟಿಕೆಟ್ ನೀಡುವಂತೆ ಎಚ್.ಆಂಜನೇಯ ಅಭಿಮಾನಿ ಬಳಗ ಹೈಕಮಾಂಡ್ ಗೆ ಒತ್ತಾಯಿಸಿದೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖಂಡ ಎಚ್.ಎನ್. ನಾಗರಾಜ್ , ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಯಾವುದೇ ಸಂದರ್ಭ ದಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವ ಮತ್ತು ಪಕ್ಷದ್ರೋಹ ಮಾಡದೆ ದೃಢವಾಗಿ ಪಕ್ಷದ ಒಗ್ಗಟ್ಟಿಗೆ ಬಲ ತುಂಬಲು ಸದಾ ಸಿದ್ಧರಾಗಿರುವ ಧೀಮಂತ ನಾಯಕ ಮಾಜಿ ಸಚಿವ ಎಚ್.ಆಂಜನೇಯರಿಗೆ ಇದೇ ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ನಾವೆಲ್ಲ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.
ನಗರಸಭಾ ಮಾಜಿ ಸದಸ್ಯ ಎಂ.ಬಿ.ಅಣ್ಣಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಸಚಿವ ಹೆಚ್.ಆಂಜನೇಯರವರಿಗೆ ಇದೇ ಜೂನ್ 13 ರಂದು 11 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಅಂದಾಜಿನ ಪ್ರಕಾರ ಕಾಂಗ್ರೆಸ್ ಪಕ್ಷ 7 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.ಅದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಯ ಕೋಟಾದಲ್ಲಾಗಲಿ ಅಥವಾ ಆದ್ಯತೆಯ ಮೇಲಾಗಲಿ ನೀಡುವಂತೆ ಒತ್ತಾಯಿಸುತ್ತೇವೆ ಎಂದರು.
ವಕೀಲ ಮಂಜುನಾಥ್ ಮಾತನಾಡಿ, ಆಂಜನೇಯರವರು ಪಕ್ಷವನ್ನು ಕೈ ಬಿಟ್ಟಿಲ್ಲ ಮತ್ತು ಪಕ್ಷದ ಸೇವಕನಾಗಿ ಹಲವಾರು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಅವರಿಗೆ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿಸಿದರೆ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಪಕ್ಷ ಪಡೆಯಬಹುದಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಭಿಮಾನಿ ಬಳಗದ ಕೆ.ಎಸ್.ಅಬ್ದುಲ್ಲಾ, ಕೆಂಚಪ್ಪ, ಹಬಿಬುಲ್ಲಾ ಬೇಗ್, ನಗರಸಭೆ ನಾಮ ನಿರ್ದೇಶೀತ ಸದಸ್ಯ ಸಂತೋಷ್, ಪಿ.ಎನ್.ಆನಂದ, ಎಂ.ಎಚ್. ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.