ಶಾಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ‘ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಪ್ರಬಲವಾಗಿ ಪ್ರತಿಪಾದಿಸಿದರು.
Read also : ತೀರಿ ಹೋದ ಶಾಮನೂರು ತೀರದ ಸೆಕ್ಯುಲರ್ ನೆನಪುಗಳು
ಇವರ ಅವಧಿಯಲ್ಲಿ ವೀರಶೈವ ಮಹಾಸಭಾದ ಹೆಸರು ವೀರಶೈವ ಲಿಂಗಾಯತ ಮಹಾಸಭಾ ಎಂಬುದಾಗಿ ಪರಿವರ್ತನೆಯಾಯಿತು. ವೀರಶೈವ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಲು ಮುಂದಾಗಿದ್ದ ಇವರು, ಮೊದಲ ಹೆಜ್ಜೆಯಾಗಿ ಪಂಚಪೀಠ ಮಠಾಧೀಶರ ಸಮ್ಮೇಳನವನ್ನು ಆಯೋಜಿಸಿ ಯಶಸ್ಸು ಕಂಡಿದ್ದರು.
