ದಾವಣಗೆರೆ ಅ.23 : ಮನಸ್ಸು ಸ್ವಚ್ಚವಾಗಿದ್ದರೆ ಅವರು ಎಲ್ಲಾದರಲ್ಲಿ ಆರೋಗ್ಯವಂತನಾಗಿ ಶ್ರೀಮಂತನಾಗಿರುತ್ತಾನೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಅಧ್ಯಕ್ಷ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ ಅಭಿಪ್ರಾಯಪಟ್ಟರು.
ಶುಕ್ರವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತರು ಎಂದರೆ ಯಾವುದೇ ಕಾಯಿಲೆ ಇಲ್ಲದೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಚೆನ್ನಾಗಿರುವುದೇ ಆಗಿದೆ. ಎಲ್ಲಾ ಸಮಯ, ಸಂದರ್ಭದಲ್ಲಿ ನೆಮ್ಮದಿಯಿಂದ ಇರುತ್ತಾ ಎಲ್ಲರೊಡನೆ ಹೊಂದಾಣಿಕೆಯಿಂದ ಬದುಕುತ್ತಾ, ಸ್ವಾವಲಂಬಿಯಾಗಿ, ಸಂತೋಷವಾಗಿ, ತೃಪ್ತಿಕರವಾಗಿರುವುದೇ ಮಾನಸಿಕ ಆರೋಗ್ಯ, ದೇಹ ಮತ್ತು ಮನಸ್ಸು ಒಂದೇ ನಾಣ್ಯದ ಎರಡು ಮುಖಗಳು.
ಒಂದಕ್ಕೆ ತೊಂದರೆಯಾದರೆ ಮತ್ತೊಂದಕ್ಕೆ ತೊಂದರೆ, ದೈಹಿಕ ಕಾಯಿಲೆ ಮಾನಸಿಕ ನೆಮ್ಮದಿಯನ್ನು ಕೆಡಿಸಿದರೆ, ಮಾನಸಿಕ ಸಮಸ್ಯೆ ದೇಹದ ಆರೋಗ್ಯವನ್ನು ಕೆಡಿಸಬಲ್ಲದು. ಕಣ್ಣು ನೋಡಿದ ಸೌಂದರ್ಯವನ್ನು ಮನಸ್ಸು ಸಂತೋಷವಾಗಿಸಬೇಕು. ಅದ್ದರಿಂದ ಮತ್ತೊಬ್ಬರಿಗೆ ತೊಂದರೆಯಾಗಬಾರದು. ಕಿವಿಯಿಂದ ಇಂಪಾದ ಸಂಗೀತವನ್ನು ಕೇಳಬೇಕೇ ಹೊರತು, ಕೆಟ್ಟಮಾತುಗಳನ್ನು ಹಾಡಬಾರದು. ಆಗ ಮಾತ್ರ ಅವನ ಮಾನಸಿಕ ಸ್ಥಿತಿ ಕೇಡುವುದಿಲ್ಲ.
ನಾವು ಮಾತನಾಡುವ ರೀತಿ, ನೋಡುವ ದೃಷ್ಠಿ ಸರಿಯಾಗಿ ಇದ್ದರೆ ಆಗ ಮಾತ್ರ ನಮಗೆ ಯಾವುದೇ ರೀತಿಯ ಮಾನಸಿಕ ಆರೋಗ್ಯ ಕೇಡುವುದಿಲ್ಲ. ಒಂದು ಮನೆಯಲ್ಲಿ ಒಬ್ಬ ವ್ಯಕ್ತಿ ಮಾನಸಿಕ ರೋಗಿ ಆಗಿದ್ದರೆ ಆಗ ಅವರ ಮನೆಯ ಪರಿಸ್ಥಿತಿ ಹೇಗಿರುತ್ತದೆ ಎಂದರೆ ತಮ್ಮ ಕೆಲಸ, ಕರ್ತವ್ಯಗಳನ್ನು ಮಾಡಲಾರರು, ದುಡಿಯಲಾರರು. ಅವರನ್ನು ನೋಡಿಕೊಳ್ಳುವುದು ಮನೆಯವರ ಕೆಲಸವಾಗಿ, ಕುಟುಂಬದ ಮಾನಸಿಕ, ಆರ್ಥಿಕ ನೆಮ್ಮದಿ ಹಾಳಾಗುತ್ತದೆ. ರೋಗಿಗಳ ಮನೆಯವರು ಮೌನವಾಗಿ ನಾನಾ ಸಂಕಟಗಳಿಗೆ ತುತ್ತಾಗುತ್ತಾರೆ. ಇದರಿಂದ ಇಡೀ ಸಮುದಾಯ ನೋವಿಗೆ ಒಳಗಾಗುತ್ತಾರೆ ಎಂದರು.
Read also : ದಾವಣಗೆರೆ|ಮಳೆಯಿಂದ ನೀರು ಕೆಸರು : ನೀರನ್ನು ಕುದಿಸಿ, ಆರಿಸಿ ಕುಡಿಯಿರಿ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣನವರ ಮಾತನಾಡಿ, ಮಾನಸಿಕ ಅಸ್ವಸ್ಥತೆವುಳ್ಳ ವ್ಯಕ್ತಿ ತಿರುಗಾಡುತ್ತಿದ್ದರೆ ಮತ್ತು ತನ್ನನ್ನು ತಾನೇ ನೋಡಿಕೊಳ್ಳಲು ಅಸಮರ್ಥನಾದರೆ ಅವರನ್ನು ರಕ್ಷಣೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಳ್ಳಬೇಕು. ರಕ್ಷಣೆಗೆ ತೆಗೆದುಕೊಂಡಂತಹ ವ್ಯಕ್ತಿಯನ್ನು ಪೊಲೀಸರು ಯಾವ ಕಾರಣಕ್ಕಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದನ್ನು ಆತನಿಗೆ ಅಥವಾ ನಾಮನಿರ್ದೇರ್ಶಿತ ಪ್ರತಿನಿಧಿಗೆ ತಿಳಿಸಬೇಕು.
ಯಾವುದೇ ಪರಿಸ್ಥಿತಿಯಲ್ಲಿ ರಕ್ಷಣೆಗೆ ತೆಗೆದುಕೊಂಡ ವ್ಯಕ್ತಿಯನ್ನು ಪೊಲೀಸ್ ಲಾಕ್‍ಆಪ್‍ನಲ್ಲಾಗಲಿ ಅಥವಾ ಜೈಲಿನಲ್ಲಾಗಲಿ ಇಡಬಾರದು. ಪೊಲೀಸರು ಕರೆದುಕೊಂಡ ಬಂದಂತಹ ವ್ಯಕ್ತಿಯ ಮಾನಸಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ವ್ಯವಸ್ಥೆ ಮಾಡುವ ಜವಾಬ್ದಾರಿ ಸಂಪೂರ್ಣವಾಗಿ ಸಾರ್ವಜನಿಕ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರಾದ್ದಗಿರುತ್ತದೆ ಎಂದರು.
ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ ಎಲ್. ಪಾಟೀಲ್, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ನಾಗವೇಣಿ, ಜಿಲ್ಲಾ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ.ಮರುಳ ಸಿದ್ದಪ್ಪ. ಪಿ.ಎಂ, ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ.ಅನುಪಮ, ಡಾ.ಮೃತ್ಯುಂಜಯ, ವೈದ್ಯಾಧಿಕಾರಿ ಡಾ.ಸುಧೀಂದ್ರ, ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಸದಸ್ಯರಾದ ಬಿ.ನಾಗಮ್ಮ, ಶಂಕರಮ್ಮ ಉಪಸ್ಥಿತರಿದ್ದರು.
