ಹರಿಹರ: ತಾಲ್ಲೂಕಿನ ವಿವಿಧೆಡೆ ಇರುವ ಸೇತುವೆಗಳ ಬಳಿ ಮರಳುಗಾರಿಕೆ ನಡೆಸದಂತೆ ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕ್ರಮಕೈಗೊಳ್ಳಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಆಗ್ರಹಿಸಿದ್ದಾರೆ.
ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ರೈಲು ಮಾರ್ಗದ ಸೇತುವೆಗಳು ತಾಲ್ಲೂಕಿನ ವಿವಿಧೆಡೆ ಇವೆ. ಈ ಸೇತುವೆಗಳ ಸಮೀಪದಲ್ಲೆ ಮರಳುಗಾರಿಕೆ ಮಾಡುತ್ತಿರುವುದರಿಂದ ಸೇತುವೆಗಳ ಭದ್ರತೆಗೆ ಧಕ್ಕೆ ಆಗುವ ಅಪಾಯವಿದೆ.
ಈ ಸೇತುವೆಗಳ ಎರಡೂ ಪಕ್ಕದ ಒಂದು ಕಿ.ಮೀ. ಪ್ರದೇಶದಲ್ಲಿ ಮರಳುಗಾರಿಕೆ ನಡೆಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ದೃಷ್ಟಿಯಿಂದ ಉತ್ತಮ ಗುಣಮಟ್ಟದ ಸಿಸಿಟಿವಿ ಕ್ಯಾಮರಾಗಳನ್ನು ಸೇತುವೆಗಳಿರುವ ಪ್ರದೇಶದಲ್ಲಿ ಅಳವಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.