ದಾವಣಗೆರೆ : ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನಲೆಯಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ (35) ಕೊಲೆಯಾದ ಮಹಿಳೆ.
ಗ್ರಾಮದ ಮಹಿಳೊಬ್ಬಳ ಜೊತೆ ಅನೈತಿಕ ಸಂಬಂಧ ವಿಚಾರದ ಹಿನ್ನಲೆಯಲ್ಲಿ ಪತ್ನಿ ಜ್ಯೋತಿ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಹರಿತವಾದ ಆಯುಧದಿಂದ ಕತ್ತು ಕತ್ತರಿಸಿ ಕೊಲೆ ಮಾಡಿದ್ದಾನೆ.
Read also : ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನದಲ್ಲಿ ಮಕ್ಕಳು ಚಾಂಪಿಯನ್ ಆಗಬೇಕು : ಡಿಸಿ
ಗಂಡ ಬಾಲರಾಜ್‌ನನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಡಾಗ್ ಸ್ಕ್ವಾಡ್ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.