Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ
ರಾಜಕೀಯ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ

Dinamaana Kannada News
Last updated: March 19, 2024 12:46 pm
Dinamaana Kannada News
Share
I am a strong CM
I am a strong CM
SHARE

ಬೆಂಗಳೂರು :
ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು “ವೀಕ್ ಪಿಎಂ” ಅಲ್ಲದೆ ಮತ್ತೇನು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಪ್ರಧಾನಿ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು “ಸ್ಟ್ರಾಂಗ್

ಸಿಎಂ”, ನಿಮ್ಮ ಹಾಗೆ ನಾನು “ವೀಕ್ ಪಿಎಂ” ಅಲ್ಲ.

ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ “ವೀಕ್ ಪಿಎಂ” ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ.

ನೀವೊಬ್ಬ “ವೀಕ್ ಪಿಎಂ”

ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ “ವೀಕ್ ಪಿಎಂ” ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ?

ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ

ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ “ವೀಕ್ ಪಿಎಂ” ಆಗಿರುವುದಲ್ಲವೇ?

ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು “ವೀಕ್ ಪಿಎಂ” ಅಲ್ಲದೆ ಮತ್ತೇನು?

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ? ಎಂದು ಪ್ರಶ್ನಿಸಿದ್ದಾರೆ.

 

 

TAGGED:Davanagere Newsdinamaana.comI am a strong CMದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿನಾನೊಬ್ಬ ಸ್ಟ್ರಾಂಗ್ ಸಿಎಂ
Share This Article
Twitter Email Copy Link Print
Previous Article Srikanth Bagare appointed as Social Media Committee Chairman ಸಾಮಾಜಿಕ ಜಾಲತಾಣದ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ
Next Article Liaquat Ali as District President of Ahinda Sangathan ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಲಿಯಾಕತ್‌ ಅಲಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 50 : ಸಂತೈಸುವವರಿಲ್ಲ..

Kannada News | Sanduru Stories | Dinamaana.com | 10-06-2024 ಸಿಟ್ಟು ಮೌನಕ್ಕೆ (Sanduru Stories) ಹೌದು, ಯಾವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?