ದಾವಣಗೆರೆ : ಪಡಿತರ ವಿತರಣಾ ವ್ಯವಸ್ಥೆ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ 10 ಕ್ವಿಂಟಲ್‍ಗೂ ಅಧಿಕ ಧಾನ್ಯ ವಶಪಡಿಸಿಕೊಳ್ಳಲಾಗಿದೆ.
ಕೆಟಿಜೆ ನಗರ, ಡಿಸಿಎಂ ಟೌನ್‍ಶಿಪ್ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಕಾಳಸಂತೆಕೋರರ ಮನೆ, ಗೋದಾಮುಗಳ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ದಾವಣಗೆರೆ ಪೆÇಲೀಸ್ ಇಲಾಖೆಯ ಅಧಿಕಾರಿಗಳು ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದಾಗ ಈ ಅಕ್ರಮ ದಾಸ್ತಾನು ಪತ್ತೆಯಾಗಿದೆ.
ಕೆಟಿಜೆ ನಗರದ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 9 ಕ್ವಿಂ ಅಕ್ಕಿ ಹಾಗೂ 1.68 ಕ್ವಿಂ ರಾಗಿ, ಡಿಸಿಎಂ ರಸ್ತೆ ಆಂಜನೇಯ ಬಡಾವಣೆ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 10.20 ಕ್ವಿಂ ಅಕ್ಕಿಯನ್ನು ಆಹಾರ ನಿರೀಕ್ಷಕ ಟಿ.ಮಂಜುನಾಥ ಪೊಲೀಸ್ ರೊಂದಿಗೆ ವಶಪಡಿಸಿಕೊಂಡಿದ್ದಾರೆ.
ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
