ದಾವಣಗೆರೆ: ಒಳ ಮೀಸಲು ಜಾರಿಯಾಗುವವರೆಗೆ ಸರಕಾರಿ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಬಾರದು ಎಂದು ತಾಪಂ ಮಾಜಿ ಸದಸ್ಯ ಆಲೂರು ನಿಂಗರಾಜು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂದು ಸಚಿವ ಸಂಪುಟದಲ್ಲಿ ನಿರ್ಣಯವಾಗಿದೆ. ಆದರೂ ರಾಜ್ಯ ಸರ್ಕಾರ ದಲಿತರಿಗೆ ವಂಚನೆ ಮಾಡಿ ಸದ್ದಿಲ್ಲದಂತೆ. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಹಾಗೂ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರೋದು ನೋಡಿದರೆ ದಲಿತ ವಿರೋಧಿ ಸರ್ಕಾರವೆಂದು ಎಂದು ಕಿಡಿಕಾರಿದ್ದಾರೆ.
ಕೂಡಲೇ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಳಿಸಬೇಕು ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.
ಒಳಮೀಸಲಾತಿ ಜಾರಿ ಆಗುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಬೇಕು ಎಂಬ ನಿರ್ಣಯದಂತೆ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸದಂತೆ ಆದೇಶಿಸಿದೆ. ಪ.ಜಾತಿಯ ಮೀಸಲು ವರ್ಗೀಕರಣ ಮಾಡುವ ಅಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೇ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಇಲ್ಲಿಯವರೆಗೂ ಮೀಸಲಾತಿಯನ್ನು ನೀಡದಿರುವುದು ಬೇಸರದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
Read also : ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ
ವೈಜ್ಞಾನಿಕದತ್ತಾಂಶಗಳನ್ನು ಆಧರಿಸಿ ಮೀಸಲು ವರ್ಗೀಕರಣಕ್ಕೆ ಮುಂದಾಗಿರುವ ಸರಕಾರ, ಮೀಸಲು ವರ್ಗೀಕರಣ ಆಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂದು ಸೂಚಿಸಲಾಗಿದೆ. ಆದರೂ ತೆರೆಮರೆಯಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿರುವುದು ನಮ್ಮ ಸಮುದಾಯಗಳಿಗೆ ಮಾಡಿದೆ ಅನ್ಯಾಯವಾಗಿದೆ ಕೂಡಲೆ ಪ್ರಕ್ರಿಯೆಗಳನ್ನು ಸ್ಥಗಿತ ಮಾಡಬೇಕೆಂದು ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.