Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

Dinamaana Kannada News
Last updated: February 10, 2026 12:14 pm
Dinamaana Kannada News
Share
Davanagere
SHARE

ದಾವಣಗೆರೆ : 2026-2027ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ, ಹಣ ದುರ್ಬಳಕೆ ತಡೆಯಲು ಎಸ್ಸಿಎಸ್ಪಿ/ಟಿಎಸ್ಪಿ  ಕಾಯ್ದೆ ಸೆಕ್ಷನ್ 7 (ಸಿ) ರದ್ದುಪಡಿಸಬೇಕು ಹಾಗೂ ವಿವಿಧ ಬೇಡಿಕೆಗಳಿಗೆ ಸೂಕ್ತ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಂವಿಧಾನದ ರಾಜ್ಯ ನಿರ್ದೇಶಿತ ತತ್ವಗಳ ಪರಿಚ್ಚೇದ 37 ಮತ್ತು 46 ರಲ್ಲಿ ಶೋಷಿತ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸುವ ಒಟ್ಟು ಬಜೆಟ್ ಗಾತ್ರದಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆಯ ಅನುಗುಣವಾಗಿ ಅನುದಾನ ಮೀಸಲಿಡಲು ಸೂಚಿಸಿದೆ.

ಮೀಸಲಿರಿಸಿದ ಅನುದಾನವನ್ನು ರದ್ದಾಗದಂತೆ ಮತ್ತು ಇತರೆ ಯೋಜನೆಗಳಿಗೆ ವರ್ಗಾಯಿಸದಂತೆ ಉದ್ದೇಶಿತ ಯೋಜನೆಗಳಿಗೆ ಬಳಕೆಯಾಗಬೇಕೆಂದೂ ನಿರ್ದೇಶನ ನೀಡಿದೆ. ಆದರೆ, 2023 ರಿಂದ ಅಧಿಕಾರದಲ್ಲಿರುವ ಕಾಂಗ್ರೆಸ್  ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಪ.ಜಾತಿ ಹಾಗೂ ಪ.ಪಂಗಡ (ಎಸ್ ಸಿ ಎಸ್ ಪಿ /ಟಿ ಎಸ್ ಪಿ)ಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಏಕಪಕ್ಷೀಯವಾಗಿ ಸುಮಾರು 25 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಅವಕಾಶ ವಂಚಿತ ಪ.ಜಾತಿಗಳಿಗೆ ವಂಚನೆ ಮಾಡಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಪ.ಜಾತಿ ವಿಶೇಷ ಯೋಜನೆ ಮತ್ತು ಪ.ಪಂಗಡದ ಉಪಯೋಜನೆ (ಎಸ್ಸಿಎಸ್ಪಿ/ಟಿಎಸ್ಪಿ) ಕಾಯ್ದೆ 2013ರ ಪ್ರಕಾರ ರಾಜ್ಯ ಸರ್ಕಾರ ಪ್ರತಿ ವರ್ಷ ತನ್ನ ವಾರ್ಷಿಕ ಒಟ್ಟು ಬಜೆಟ್ ನ ಶೇ. 24.1ರಷ್ಟು ಮೊತ್ತವನ್ನು ಈ ಸಮುದಾಯ ಗಳ ಅಭಿವೃದ್ಧಿಗಾಗಿ ಖರ್ಚುಮಾಡ ಬೇಕೆಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.  

ಎಸ್ಸಿ, ಎಸ್ಟಿ ಸಮುದಾಯಗಳು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಮೂಲ ಸೌಕರ್ಯ ಸೃಷ್ಟಿಸಲು ಮತ್ತು ಅಲಕ್ಷಿತ ಆ ಸಮುದಾಯಗಳನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿ ಸಮಾಜದ ಮುಖ್ಯ ವಾಹಿನಿಯೊಂದಿಗೆ ಬೆರೆಯುವಂತೆ ಮಾಡು ವುದು ಈ ಕಾಯ್ದೆಯ ಉದ್ದೇಶವಾಗಿದೆ. ಸದರಿ ಯೋಜನೆಯ ಉದ್ದೇಶ ತುಂಬಾ ಸ್ಪಷ್ಟವಾಗಿದ್ದರೂ  ಗ್ಯಾರಂಟಿ ಯೋಜನೆಗಳಿಗೆ 25 ಸಾವಿರ ಕೋಟಿ ದಲಿತರ ಅಭಿವೃದ್ಧಿ ನಿಧಿಯನ್ನು ವರ್ಗಾಯಿಸಿರುವ ಸರ್ಕಾರದ ಕ್ರಮವನ್ನು ದಸಂಸ ತೀವ್ರವಾಗಿ ಖಂಡಿಸಿದೆ.

Read also : ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

ಸರ್ಕಾರ  25ಸಾವಿರ ಕೋಟಿ ಹಣವನ್ನು ಪುನಃ ಹಿಂದಿರುಗಿಸುವ ಮೂಲಕ ದಲಿತಪರ ಕಾಳಜಿ ತೋರಿಸಬೇಕೆಂದು ಅಗ್ರಹಿಸಿ, ಪ್ರಸಕ್ತ 2026-27ನೇ ಸಾಲಿನ ಒಟ್ಟು ಬಜೆಟ್ ನ ಶೇ 24.1ರಷ್ಟು ಎಸ್ ಸಿ ಎಸ್ ಪಿ /ಟಿ ಎಸ್ ಪಿ ಅನುದಾನ ಮೀಸಲಿರಿಸಿ, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯಿಂದಲೇ ಸೆಕ್ಷನ್ 7( ಅ) ಯನ್ನು ರದ್ದುಪಡಿಸುವಂತೆ, ದಲಿತ ಮತ್ತು ಇತರೆ ಹಿಂದುಳಿದ ವರ್ಗಗಳ ಈ ಕೆಳಕಂಡ ಅತ್ಯಗತ್ಯ ಬೇಡಿಕೆಗಳಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ರಾಜ್ಯ ಸರ್ಕಾರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ  ಮಂಜುನಾಥ ಕುಂದುವಾಡ,ವಿಜಯಲಕ್ಷ್ಮೀ ಕೆ., ಮಹಂತೇಶ್, ಚಿತ್ತನಹಳ್ಳಿ ನಾಗರಾಜ್,ಕುಂದುವಾಡ ಹಾಲೇಶ್, ಅರತಿ,ಭಾಗ್ಯಮ್ಮ,ಹನುಮಂತಪ್ಪ ಗಂಗನಕಟ್ಟೆ ಇತರರು ಇದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ
Next Article Jagalore ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere University | ಮುಂದೂಡಿದ್ದ ಪರೀಕ್ಷೆ ಆ.24 ರಂದು : ಕುಲಸಚಿವ ಪ್ರೊ.ಸಿ.ಕೆ.ರಮೇಶ್

ದಾವಣಗೆರೆ (DAVANAGERE)  : ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‌ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಆಗಸ್ಟ್  24…

By Dinamaana Kannada News

Political analysis|ಜನವರಿ ಒಂಭತ್ತಕ್ಕೆ ದಿಲ್ಲಿಯಲ್ಲಿ ಫೈನಲ್ !!

ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.ಇದಾದ ನಂತರ ಪಕ್ಷದ ನಾಯಕ…

By Dinamaana Kannada News

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಲಿಯಾಖತ್ ಆಲಿ

ದಾವಣಗೆರೆ (Davanagere): ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಲಿಯಾಖತ್ ಆಲಿ ಅವರನ್ನು ರಾಜ್ಯ ಸರಕಾರ ನೇಮಕ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Davanagere
ತಾಜಾ ಸುದ್ದಿ

ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?