Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

Dinamaana Kannada News
Last updated: February 24, 2026 1:39 pm
Dinamaana Kannada News
Share
Davanagere
SHARE

ದಾವಣಗೆರೆ : ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರನ್ನು ಸರ್ಕಾರಿ ಸೇವೆಯಲ್ಲಿ ಖಾಯಂಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭೂಮಾಪಕರ ಸಂಘದಿಂದ  ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಡಳಿತ ಮುಂಭಾಗ ಜಾಮಾಯಿಸಿದ ಭೂಮಾಪಕರು  ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕರಿಗೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಳೆದ 2025ರ ಏಪ್ರಿಲ್ 10ರಂದು ನಡೆದ ರಾಷ್ಟ್ರೀಯ ಭೂಮಾಪಕರ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪರವಾನಗಿ ಭೂಮಾಪಕರನ್ನು ಸರ್ಕಾರಿ ನೌಕರರನ್ನಾಗಿ ಖಾಯಂಗೊಳಿಸುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈವರೆಗೆ ಸರ್ಕಾರವಾಗಲಿ ಅಥವಾ ಸಂಬಂಧಪಟ್ಟ ಇಲಾಖೆಯಾಗಲಿ ಈ ಬಗ್ಗೆ ಯಾವುದೇ ಅಧಿಕೃತ ಕ್ರಮ ಕೈಗೊಂಡಿಲ್ಲ. ಈ ವಿಳಂಬ ಧೋರಣೆಯನ್ನು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಮತ್ತು ಜೀವ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಲಾಗಿದೆ. ಪ್ರಸ್ತುತ ಪ್ರತಿ ಪ್ರಕರಣಕ್ಕೆ ನೀಡಲಾಗುತ್ತಿರುವ 1200 ರೂ.ಗಳ ಸಂಭಾವನೆಯು ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ, ಆದ್ದರಿಂದ ಇದನ್ನು 3000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ಸೇವಾ ಶುಲ್ಕವನ್ನು ಬಿಡುಗಡೆ ಮಾಡದಿರುವುದು, ತತ್ಕಾಲ್ ಪೋಡಿ ಪ್ರಕರಣಗಳಲ್ಲಿ ಕನಿಷ್ಠ ಸಂಭಾವನೆ ನೀಡುತ್ತಿರುವುದು ಹಾಗೂ ಅಂತರ ಜಿಲ್ಲೆಗಳ ನಿಯೋಜನೆಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕಚೇರಿ ಕೆಲಸಗಳಿಗೆ ಸ್ವಂತ ಕಂಪ್ಯೂಟರ್, ಪ್ರಿಂಟರ್ ಹಾಗೂ ಅಂತರ್ಜಾಲ ಬಳಸುತ್ತಿದ್ದರೂ ಸೂಕ್ತ ಸಂಭಾವನೆ ದೊರೆಯುತ್ತಿಲ್ಲ ಎಂದು ಕಿಡಿಕಾರಿದರು‌

ಬೇಡಿಕೆಗಳು ಈಡೇರುವವರೆಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಲಾಗಿನ್‌ನಲ್ಲಿರುವ ಎಲ್ಲಾ ಕಡತಗಳನ್ನು ಹಿಂಪಡೆದು, ಅನಿರ್ದಿಷ್ಟಾವಧಿಯವರೆಗೆ ಕೆಲಸ ಸ್ಥಗಿತಗೊಳಿಸುತ್ತಿರುವುದಾಗಿ ಇದೇ ವೇಳೆ ಎಚ್ಚರಿಸಿದರು.

Read also : ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ:ವೇದಾಂತಚಾರ್ಯರಾದ ದಯಾನಂದ ಸರಸ್ವತಿ

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಟಿ.ಎಸ್. ಗುರುಮೂರ್ತಿ, ಯು. ನಾಗರಾಜು, ಡಿ.ಆರ್. ಬಾಸ್ಕರ್, ಎಸ್.ಕೆ. ಶಿವರಾಜ್, ಕೆ. ರಾಜಪ್ಪ, ಜಗದೀಶ್, ವಿನಯ್ ಕುಮಾರ್ .ಕೆ, ಅಭಿಷೇಕ್, ಎಚ್.ಎಂ. ವೃಷಬೇಂದ್ರಯ್ಯ ಹಾಗೂ ಸಂತೋಷ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪರವಾನಗಿ ಭೂಮಾಪಕರು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ
Share This Article
Twitter Email Copy Link Print
Previous Article Applications invited ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!

ದಾವಣಗೆರೆ (Davanagere): ಕಣ್ಣೆದುರಿಗೆ ರೈಲಿನ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಅಂಗವಿಕಲ ಪ್ರಯಾಣಿಕನನ್ನು ಕರ್ತವ್ಯ ನಿರತ ಆರ್‌ಪಿಎಫ್ ಮುಖ್ಯ ಪೇದೆ…

By Dinamaana Kannada News

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು…

By Dinamaana Kannada News

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ ನ.27: ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ…

By Dinamaana Kannada News

You Might Also Like

Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?