ಹರಿಹರ (Davanagere) : ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹರಿಹರ ತಾಲೂಕು ಕಚೇರಿಯ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಕಪ್ಪು ಪಟ್ಟಿ ಧರಿಸಿ ಆನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಸಮಿತಿಯ ಅಧ್ಯಕ್ಷ ಬೋರಯ್ಯ, ನಮಗೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಅಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು ೨೧ಕ್ಕೂ ಅಧಿಕ ಮೊಬೈಲ್ ಮತ್ತು ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಏರಲಾಗುತ್ತಿದೆ. ಕರ್ತವ್ಯ ನಿರ್ವಹಿಸಲು ಒತ್ತಡ ಏರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು – ನೋವುಗಳು ಆಗುತ್ತಿವೆ ಎಂದು ಹೇಳಿದರು.
ತಾಲೂಕು ನೌಕರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್ ಮಾತನಾಡಿ, ಮೊಬೈಲ್ ಆಪ್ ಗಳ ಮೂಲಕ ತುಂಬಾ ಸಮಸ್ಯೆ ಆಗುತ್ತಿದ್ದು, ಮೊಬೈಲ್ ಸಾಧನ ಹಾಗೂ ಲ್ಯಾಪ್ ಟ್ಯಾಪ್ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮ ಆಡಳಿತ ಅಧಿಕಾರಿ ಕುಪೇಂದ್ರ ಮಾತನಾಡಿ, ಕೆಲಸದ ಅವಧಿಯ ಮುನ್ನ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ವರ್ಚುವಲ್ ಸಭೆಗಳನ್ನು ನಿಷೇಧಿಸಬೇಕು, ವಿಶೇಷ ಚೇತನ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತುಪಡಿಸಿ ತಾಲೂಕ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ತಾಲೂಕು ಗೌರವಾಧ್ಯಕ್ಷ ಎಚ್ ಜಿ ಹೇಮಂತ್ ಕುಮಾರ್, ಉಪಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಪ್ರಭು, ಜಂಟಿ ಕಾರ್ಯದರ್ಶಿ ಮಾರುತಿ, ಸಾಂಸ್ಕೃತಿಕ ಕಾರ್ಯದರ್ಶಿ ಸೌಮ್ಯ, ತಾಲೂಕಿನ ಸರ್ವ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
Read also : LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು