ದಾವಣಗೆರೆ: ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬಡಾವಣೆ ಠಾಣೆಯಲ್ಲಿ ಸೋಮವಾರ ದೂರು ನೀಡಿದ್ದಾರೆ.
ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ಸಮಯದಲ್ಲಿ ತಮ್ಮ ಬೆಂಬಲಿಗ ರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ದಾವಣಗೆರೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ ವೀರಣ್ಣ ನಗರದ ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ, ಶೀಘ್ರದಲ್ಲೇ ಜಿಲ್ಲೆಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ
ಸಮಾಜದ ಹಿರಿಯ ಮುಖಂಡರಾದ ಎ.ಬಿ ರಾಮಚಂದ್ರಪ್ಪ ಮಾತನಾಡಿ, ರಮೇಶ ಕತ್ತಿ ಅವರು ವಾಲ್ಮೀಕಿ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ರಮೇಶ್ ಕತ್ತಿ ಇವರನ್ನು ಕೂಡಲೇ ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆಂದು ಅಗ್ರಹ ಪಡಿಸಿದರು.
ರಮೇಶ್ ಕತ್ತಿ ಅವರ ದರ್ಪ ರಾಜ್ಯದಲ್ಲಿ ನಡೆಯದು ಇದಕ್ಕೆ ನಾಯಕ ಸಮಾಜ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಮಾಜದ ಮುಖಂಡರುಗಳಾದ ಎನ್. ಎಂ. ಆಂಜನೇಯ ಗುರೂಜಿ. ಕಾರ್ಯದರ್ಶಿ ಶ್ಯಾಗಲೆ ಕೆ.ಆರ್ ಮಂಜುನಾಥ್. ಶ್ರೀನಿವಾಸ್ ದಾಸ ಕರಿಯಪ್ಪ ಯುವ ಘಟಕದ ಅಧ್ಯಕ್ಷ ಬಸವರಾಜ ತೋಟದ. ಶಾಮನೂರು ಪ್ರವೀಣ್. ಮಲ್ಲಾಪುರ ದೇವರಾಜ್ ಪಣಿಯಾಪುರ ಲಿಂಗರಾಜ್. ಕರುರೂ ಹನುಮಂತು. ಗೋಶಾಲ ಸುರೇಶ. ಶಶಿ ಶ್ರೀಕಂಠಪುರ. ಮಂಜು ಗೊಲ್ಲರಹಳ್ಳಿ .ವರುಣ್ ಬೆಣ್ಣಿಹಳ್ಳಿ. ರಾಘು ದೊಡ್ಮನಿ ಸಂತೋಷ್ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.
