ದಾವಣಗೆರೆ ಸೆ.14 : ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಸೆ.14 ರಂದು ಜಿಲ್ಲಾಡಳಿತ ಭವನದಿಂದ ಬೈಕ್ ರ‍್ಯಾಲಿಯನ್ನು ಉಪ ವಿಭಾಗಧಿಕಾರಿ ಸಂತೋಷ ಪಾಟೀಲ್ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು.
ಸುಮಾರು 10 ಕ್ಕಿಂತ ಹೆಚ್ಚು ಬೈಕ್ ಸವಾರರು ರ‍್ಯಾಲಿ ಯಲ್ಲಿ ಭಾಗವಹಿಸಿದ್ದರು.ರ‍್ಯಾಲಿಯು ಜಿಲ್ಲಾಡಳಿತ ಭವನದಿಂದ ಹೊರಟು ಬಾಡಾ ಕ್ರಾಸ್‍ವರೆಗೆ ತಲುಪಿ ಅಲ್ಲಿಂದ ಬೆಂಗಳೂರಿಗೆ ಹೊರಟಿತು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹರ್ಷ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.