Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: March 8, 2025 11:59 am
Dinamaana Kannada News
Share
basavanthappa k s
basavanthappa k s
SHARE

ದಾವಣಗೆರೆ (Davanagere) : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಮತ್ತಿ ಗ್ರಾಮದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆ ಹಾಗೂ ಮತ್ತಿ ಗ್ರಾಪಂ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ನೂತನ 556 ನೇ ಶುದ್ಧಗಂಗಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಕಾಲಿರಿಸಿ ಗಣನೀಯವಾದ ಸಾಧನೆಯನ್ನು ಮಾಡಿದ್ದಾರೆ. ಇಂದು ಪುರುಷರಿಗಿಂತ ಮಹಿಳೆಯರೇನೂ ಕಡಿಮೆಯಿಲ್ಲ ಎಂಬ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಈ ಹಿಂದೆ ನಾಲ್ಕು ಗೋಡೆಗಳ ಮಧ್ಯೆ ಅಡಿಗೆ ಮನೆಗೆ ಸೀಮಿತವಾಗಿದ್ದ ಮಹಿಳೆ ಇಂದು ತನ್ನ ಜ್ಞಾನವನ್ನು ಬೆಳೆಸಿಕೊಂಡು ಸಮಾಜದ ಎಲ್ಲಾ ರಂಗಗಳಲ್ಲೂ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡುತ್ತಿದ್ದಾಳೆ ಎಂದು ಹೇಳಿದರು.

ನೀರಿನ ಬವಣೆ ಆಗದಂತೆ ಎಚ್ಷರಿಕೆ ವಹಿಸಿ :

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬವಣೆ ತಪ್ಪಿಲ್ಲ. ಇದು ಬೇಸಿಗೆ ಕಾಲದಲ್ಲಿ ಈ ಸಮಸ್ಯೆ ಹೆಚ್ಚಾಗುತ್ತದೆ. ಮುಂಜಾಗ್ರತೆ ವಹಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯವಂತರಾಗಿರಬೇಕು ಎಂಬ ಒಳ್ಳೆಯ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಗ್ರಾಮಸ್ಥರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಒಂದು ಹಳ್ಳಿ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿನ ಜನರಿಗೆ ಶುದ್ಧ ಕುಡಿಯವ ನೀರು, ಆರೋಗ್ಯ ಸೇವೆ ಮುಖ್ಯವಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾಗಿದ್ದು, ಸಮಾಜದವಸ್ತರಗಳನ್ನು ಒಳಗೊಂಡಿದೆ. ವಿಶೇಷವಾಗಿ ಮಹಿಳೆ, ಮಕ್ಕಳು, ಶಿಕ್ಷಣ, ಕೃಷಿ, ನೀರಾವರಿ, ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಿಗೂ ಆದ್ಯತೆ ನೀಡಿದ್ದಾರೆ. ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಮುಂದುವರಿಸಿದ್ದಾರೆ. ಪಂಚ ಗ್ಯಾರಂಟಿ ನಿಲ್ಲಿಸುತ್ತಾರೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮಿ ಹಣ ಪಾವತಿಸಲು ಸ್ವಲ್ಪ ತಡವಾಗಿರಬಹುದು. ವಿಳಂಬವಾದ ಎಲ್ಲಾ ಕಂತಿನ ಹಣವನ್ನು ಮಹಿಳೆಯರ ಖಾತೆ ಜಮಾ ಮಾಡಲಾಗುತ್ತದೆ. ನೀವು ಯಾರೂ ಗೊಂದಲಕ್ಕೆ ಒಳಗಾಗಬೇಡಿ ಎಂದರು.

Read also : Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ನೀಲಕಂಠಪ್ಪ, ಉಪಾಧ್ಯಕ್ಷೆ ಕಮಲಮ್ಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ನಿರ್ದೇಶಕ ಲಕ್ಷ್ಮಣ, ಪಿಡಿಒ ಕೆ.ಸಿ.ವನಿತಾಬಾಯಿ, ಗ್ರಾಪಂ ಸದಸ್ಯರಾದ ಸತೀಶ್, ಕೆ.ಬಿಮಂಜುನಾಥ್, ಮಂಜುಳ ಸುರೇಶ್, ಶಿಲ್ಪ ಟಿ.ಆರ್.ಹನುಮಂತಪ್ಪ, ಗ್ರಾಮದ ಮುಖಂಡ ಹನುಮಂತಪ್ಪ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಗುತ್ತಿಗೆದಾರರ ವಿರುದ್ಧ ಅಸಮಾಧಾನ…

ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕೆಗಳನ್ನು ಗುತ್ತಿಗೆದಾರರು ಸರಿಯಾಗಿ ನಿರ್ವಹಿಸುತ್ತಿಲ್ಲ. ನಿರ್ವಹಣೆ ಇಲ್ಲದೆ ಘಟಕಗಳು ಸ್ಥಗಿತಗೊಳ್ಳುತ್ತಿವೆ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿರಬಹುದು ಎಂಬ ದೂರುಗಳು ಬರುತ್ತಿವೆ. ಒಂದು ವೇಳೆ ಶಾಮೀಲಾಗಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಒದಗಿಸುವುದು

ಅಧಿಕಾರಿಗಳ ಜವಾಬ್ದಾರಿ. ನೀರಿನ ಘಟಕಗಳ ನಿರ್ವಹಣೆ ಗುತ್ತಿಗೆದಾರರಿಗೆ ವಹಿಸದೆ ಗ್ರಾಪಂಗಳಿಗೆ ವಹಿಸಬೇಕು. ಆಗ ಘಟಕಗಳು ಸರಿಯಾಗಿ ನಿರ್ವಹಣೆ ಆಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಸೂಚಿಸುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.

TAGGED:Davanagere districtDavanagere NewsDinamana.comInternational Women's DayMLA K.S. Basavanthappaಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Eeshwaramma Higher Primary High School Davanagere Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್
Next Article ಬಾಪೂಜಿ ವಿದ್ಯಾಸಂಸ್ಥೆ Davanagere | ಮಿಸ್ ಪಾರ್ವತಿ ಕಾರ್ಯಕ್ರಮ; ಸಂಸದರಿಂದ ಪೋಸ್ಟರ್ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಜ್ಯದ ಮೇಲೆ‌ 3D ನೀತಿ ಅನುಸರಿಸಿದ ಕೇಂದ್ರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ 

ದಾವಣಗೆರೆ/ನವದೆಹಲಿ (Davanagere): ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ.…

By Dinamaana Kannada News

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಈ ವಾರ ಭಾರೀ ಮಳೆ

ಕರ್ನಾಟಕದಾದ್ಯಂತ ಇನ್ನೊಂದು ವಾರ ಭಾರೀ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,…

By Dinamaana Kannada News

Davanagere cyber crime news | ಅಪ್ಲಿಕೇಷನ್ ಡೌನ್ಲೌಡ್ ನೆಪದಲ್ಲಿ 6 ಲಕ್ಷಕ್ಕೆ ಕತ್ತರಿ

ದಾವಣಗೆರೆ (Davanagere) : ಪೋನ್ ಪೇ ಕಸ್ಟಮರ್ ಕೇರ್ ಎಂದು ಹೇಳಿ ಅಪ್ಲಿಕೇಷನ್ ಡೌನ್‍ಲೌಡ್ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ರೂ.5,00,000/-ರೂ ಮತ್ತು…

By Dinamaana Kannada News

You Might Also Like

Political analysis
ರಾಜಕೀಯ

Political analysis:ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ

By Dinamaana Kannada News
POCSO Act
ತಾಜಾ ಸುದ್ದಿಅಭಿಪ್ರಾಯ

ಪೋಕ್ಸೋ ಕಾಯ್ದೆ|ಆಳ -ಅಗಲ ಕುರಿತ ಸಮಗ್ರ ಮಾಹಿತಿ:ನ್ಯಾ.ಮಹಾವೀರ ಮ.ಕರೆಣ್ಣವರ

By Dinamaana Kannada News
Davanagere
ತಾಜಾ ಸುದ್ದಿ

ಪಲ್ಸ್ ಪೋಲಿಯೋ:ಮಕ್ಕಳಿಗೆ ಲಸಿಕೆ ಹಾಕಿದ ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯರಿಂದ ಮಕ್ಕಳಿಗೆ ಪೊಲೀಯೋ ಲಸಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?