Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ
ತಾಜಾ ಸುದ್ದಿ

ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ

Dinamaana Kannada News
Last updated: January 18, 2026 4:17 am
Dinamaana Kannada News
Share
SHARE

ದಾವಣಗೆರೆ : ಸಮುದಾಯದ ಯುವಕರು ಸಂವಿಧಾನದ ಆಶಯಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆ ಎಂದು ಚಿತ್ರದುರ್ಗದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಬೆಂಗಳೂರಿನ ಭಾರತದ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ, ತರಬೇತಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಶ್ರೀಜಗದ್ಗುರ ಸಿದ್ದರಾಮೇಶ್ವರ ಮಹಾಸಂಸ್ಥಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ನ್ಯಾಯ ನಾಯಕತ್ವ ತರಬೇತಿಯ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ನಾವುಗಳು ಎಷ್ಟೇ ದೊಡ್ಡ ಮಟ್ಟದಲ್ಲಿ ಬೆಳೆದರೂ ಸಹ ಸಮಾಜದಲ್ಲಿ ಪ್ರತಿದಿನ ನೆಡೆಯುವ ವಿದ್ಯಾಮಾನಗಳ ಬಗ್ಗೆ ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಮತ್ತು ಈ ಎರಡು ದಿನದ ಕಾರ್ಯಾಗಾರದಲ್ಲಿ ನಡೆಯುವಂತಹ ವಿವಿಧ ವಿಷಯಗಳ ಕುರಿತು ತಿಳಿದುಕೊಳ್ಳುವ ಮನಸ್ಸು ನಮ್ಮದಾಗಬೇಕು ಜೊತೆಗೆ ನಾವು ಕಲಿತುಕೊಂಡಿದ್ದನ್ನು ಬೇರೆಯವರಿಗೆ ಅದನ್ನು ತಿಳಿಸುವಂತಹ ಕೆಲಸ ನಾವುಗಳು ಮಾಡಬೇಕು ಆಗ ನಮುದಾಯದ ಅಭಿವೃದ್ಧಿ ಆಗುತ್ತದೆ ಎಂದು ಸಮುದಾಯದ ಯುವಕ ಯುವತಿಯರಿಗೆ ಮತ್ತು ಮುಖಂಡರಿಗೆ ಕಿವಿ ಮಾತು ಹೇಳಿದರು.

ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನಾತ್ಮಕ ಮಾಹಿತಿಯ ಕೊರತೆಯಿಂದಾಗಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ, ಸಮುದಾಯದೊಳಗೆ ಸಾಮಾಜಿಕ ನ್ಯಾಯದ ಅರಿವು, ಕಾನೂನು ತಿಳುವಳಿಕೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ ಎಂದರು

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಭೋವಿ ಸಮುದಾಯದ ಯುವಜನರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ ಸಂಬಂಧಿತ ಕಾನೂನುಗಳ ಬಗ್ಗೆ ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ ಎರಡು ದಿನಗಳ ನಾಲ್ಕು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

Read also : ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ

ಕಾರ್ಯಾಗಾರದ ಮುಖ್ಯ ಉದ್ದೇಶಗಳು ಸಂವಿಧಾನಾತ್ಮಕ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಸಮುದಾಯದ ಯುವಜನರಲ್ಲಿ ಅರಿವು ಮೂಡಿಸುವುದು. ಶಿಕ್ಷಣ, ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಸಂವಿಧಾನಾತ್ಮಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳಲು ಸಹಾಯ ಮಾಡುವುದು. ಸರ್ಕಾರದ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಮಾಹಿತಿ ನೀಡುವುದು ಕಾನೂನುಗಳ ಅನುಷ್ಠಾನದಲ್ಲಿ ಎದುರಾಗುವ ಸವಾಲುಗಳು ಹಾಗೂ ಅವುಗಳಿಗೆ ಪರಿಹಾರ ಮಾರ್ಗಗಳನ್ನು ವಿವರಿಸುವುದು ಸ್ಥಳೀಯ ಮಟ್ಟದಲ್ಲಿ ಸಮುದಾಯದ ಸಮಸ್ಯೆಗಳಿಗೆ ಮಾರ್ಗದರ್ಶನ ನೀಡುವ ಸಾಮಾಜಿಕ ನಾಯಕತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರ ನಾಯಕ್ ಯು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಯುವ ಮುಖಂಡರಾದ ರವಿ ಪೂಜಾರಿ, ಗೋವಿಂದಪ್ಪ ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ
Next Article Davanagere ಜಿಲ್ಲೆಯಲ್ಲಿ ಆಡಳಿತ ಯಂತ್ರ ಸತ್ತು ಹೋಗಿದೆ : ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಅಪಾದನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲೆಕ್ಸ್ ಹರಿದು ವಿರೂಪಗೊಳಿಸಿದ ಪ್ರಕರಣ ಐವರ ಬಂಧನ

ದಾವಣಗೆರೆ : ದಸರಾ ಹಬ್ಬದ ಸಮಯದಲ್ಲಿ ಪ್ಲೆಕ್ಸ್ ಹರಿದು ವಿರೂಪಗೊಳಿಸಿದ 05 ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಆಬೀದ್, ಆತಿಕ್,ಸಾಧಿಕ್,ಅಮಾನುಲ್ಲಾ…

By Dinamaana Kannada News

ಶಾಲಾ ಪುಸ್ತಕ ಸುಟ್ಟ ಮದ್ಯವ್ಯಸನಿ ತಂದೆ:ವಿದ್ಯಾರ್ಥಿನಿಯ ನೆರವಿಗೆ ಧಾವಿಸಿ  ಮಾನವೀಯತೆ ಮೆರೆದ 112 ಪೊಲೀಸ್ ಸಿಬ್ಬಂದಿ!

​ದಾವಣಗೆರೆ.ಫೆ.8: ನಿತ್ಯ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ಮಗಳ ಓದಿಗೇ ಕೊಳ್ಳಿ ಇಟ್ಟ ತಂದೆಯೊಬ್ಬನ ಕೃತ್ಯಕ್ಕೆ ತಡೆ ಹಾಕಿ, ವಿದ್ಯಾರ್ಥಿನಿಯ…

By Dinamaana Kannada News

ಹೋರಾಟಗಳ ಅಂತಃಕರಣ-ಅನಿಲ್  ಹೊಸಮನಿ: ಬಿ.ಶ್ರೀನಿವಾಸ

ಹೋರಾಟಗಳ ಅಂತಃಕರಣ-ಅನಿಲ್  ಹೊಸಮನಿ: 1945-46 ರ ಕಾಲ. ಬಿಜಾಪುರ ಜಿಲ್ಲೆಯ ಅಲಮೇಲು ಗ್ರಾಮದಲ್ಲಿ ಪ್ರೈಮರಿ ಸ್ಕೂಲಿನಲ್ಲಿ ಓದುತ್ತಿದ್ದ ಅಸ್ಪೃಶ್ಯ ಬಾಲಕನೊಬ್ಬ, ನೀರಡಿಕೆಯಿಂದಾಗಿ…

By ಬಿ.ಶ್ರೀನಿವಾಸ

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?