ದಾವಣಗೆರೆ (Davanagere): ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ 1.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಜಗಳೂರು ತಾಲೂಕಿನ ಬಸಾಪುರ ಗ್ರಾಮದ ಸಿ.ಸಿದ್ದೇಶ ಬಂಧಿತ ಆರೋಪಿ. ಮನೆಯ ಬೀಗವನ್ನು ಬೈಕ್‌ನ ಬ್ಯಾಗ್‌ನಲ್ಲಿ ಇಡಲಾಗಿತ್ತು. ಆ ಬೀಗವನ್ನು ಬಳಸಿ ಮನೆಗೆ ನುಗ್ಗಿದ್ದ ಆರೋಪಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಕುರಿತು ಮನೆಯ ಮಾಲೀಕರು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಆರೋಪಿ ವಿರುದ್ಧ ಜಗಳೂರು ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ.
Read also : Crime news | ಪ್ರತ್ಯೇಕ ಬೈಕ್ ಕಳವು ಪ್ರಕರಣ: ಐದು ಜನರ ಬಂಧನ