ದಾವಣಗೆರೆ,ಅ.24 (Davanagere) ; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಅ.24 ರಂದು ದಾವಣಗೆರೆಯಲ್ಲಿ ರಥಕ್ಕೆ ಆದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ರಥಯಾತ್ರೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಾಮದೇವಪ್ಪ, ಕನ್ನಡಪರ ಸಂಘಟನೆಯ ಮುಖಂಡರು, ರೈತ ಕಾರ್ಮಿಕ ಸಂಘಟನೆ ಮುಖಂಡರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.
Read also : short story | ಪ್ರೀತಿಯ ಕೊರತೆಯಲ್ಲಿ ನೀಲಾ !