ಹರಿಹರ (Davangere District) : ಸುಪ್ರೀಂ ಕೋರ್ಟ್ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಸೆ.12 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ತಮಟೆ ಚಳವಳಿ ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Read also : Davanagere news | ನಗರ ಸ್ವಚ್ಚಗೆ ನಾಗರಿಕರು ಕೈಜೋಡಿಸಬೇಕು: ಡಾ.ಪ್ರಭಾ ಮಲ್ಲಿಕಾರ್ಜುನ್
ಅಂದು ಬೆಳಿಗ್ಗೆ 10ಗಂಟೆಗೆ ದಾವಣಗೆರೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಣೆ ಮಾಡಲಾಗುವುದು. ಸಂಘಟನೆಯ ತಾಲ್ಲೂಕಿನ ಕಾರ್ಯಕರ್ತರು, ಚಿಂತಕರು, ಬುದ್ಧಿ ಜೀವಿಗಳು, ವಿದ್ಯಾರ್ಥಿಗಳು ಸಾಮಾಜಿಕ ನ್ಯಾಯ ಪ್ರೀತಿಸುವವರು ಆಗಮಿಸಲು ಕೋರಿದ್ದಾರೆ.