Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ

Dinamaana Kannada News
Last updated: February 27, 2026 1:27 pm
Dinamaana Kannada News
Share
Davanagere
SHARE
ದಾವಣಗೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ವೃಂದ ಸಂಘಗಳ ನೌಕರರು ಮಾಯಕೊಂಡ ಶಾಸಕ ಕೆ.ಎಸ್ ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಭೇಟಿ  ಮಾಡಿದ ನೌಕರರು, ರಾಜ್ಯದ ಎಲ್ಲಾ ಸರ್ಕಾರಿಗಳಿಗೆ ಸಕಾಲಕ್ಕೆ ಇಲಾಖೆಯಿಂದ ಸಮರ್ಪಕವಾಗಿ  ಔಷಧಗಳನ್ನು ಪೂರೈಕೆ ಮಾಡದಿರುವುದು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರದ ಆದೇಶವಿದ್ದರೂ ಸಹ ಉಲ್ಲಂಘಿಸಿ, 1973 ರಿಂದ ಈವರೆಗೂ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ ನಡೆಸಿಲ್ಲ, ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಈವರೆಗೂ ಪ್ರಕಟಿಸಿಲ್ಲ, ಇಲಾಖೆಯ ಎಲ್ಲಾ ವೃಂದದ ಅಧಿಕಾರಿ, ನೌಕರರನ್ನು ಕಳೆದ ಐದು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಅಲ್ಲದೇ ನಿಯಮಗಳಲ್ಲಿ ಅವಕಾಶವಿದ್ದರೂ ಸೇವಾನಿರತ ವೈದ್ಯರು, ಅಧಿಕಾರಿ, ನೌಕರರ ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡುತ್ತಿಲ್ಲ. ಇಲಾಖೆಯ ವರ್ಗಾವಣೆ ಕಾಯ್ದೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸದೆ ಅವೈಜ್ಞಾನಿಕವಾಗಿ  ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವುದನ್ನು ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ನೌಕರರ ಮನವಿ ಪತ್ರ ಸ್ವೀಕರಿಸಿದ ಶಾಸಕ ಕೆ .ಎಸ್ .ಬಸವಂತಪ್ಪ, ನಿಮ್ಮ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೌಕರರಿಗೆ ಭರವಸೆ ನೀಡಿದರು.
Read also : ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ
ಈ ಸಂದರ್ಭದಲ್ಲಿ  ಆರೋಗ್ಯ ಇಲಾಖೆಯ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಮಸ್ತ ಅಧಿಕಾರಿ ಹಾಗೂ ನೌಕರರು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Alur Ningaraj ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಿಎಂ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ : ಪಿ.ಜೆ.ಮಹಾಂತೇಶ್ ಆಗ್ರಹ

ಹರಿಹರ: ರಾಜ್ಯದಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆದಲಿತರಿಗೆಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ…

By Dinamaana Kannada News

ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ

ದಾವಣಗೆರೆ :  ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣವು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ…

By Dinamaana Kannada News

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

ಅತಿರಥ ಮಹಾರಥರಿಗೆ ಮಣ್ಣು ತಿನ್ನಿಸಿ. ವಿಶ್ವದ ನಕ್ಷೆಯಲ್ಲಿ ಚಾಪು ಮೂಡಿಸಿ. ಸರಳ ಗುಣದಿಂದಲೇ ಮಹಾನ್ ಎನ್ನಿಸಿ. ಸಾಧಕೀಯರ ಸಾಧನೆಯ ನಾನಿಂದು…

By Dinamaana Kannada News

You Might Also Like

Alur Ningaraj
ತಾಜಾ ಸುದ್ದಿ

ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ

By Dinamaana Kannada News
Davanagere
ತಾಜಾ ಸುದ್ದಿ

ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ

By Dinamaana Kannada News
Applications invited
ತಾಜಾ ಸುದ್ದಿ

ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?