ದಾವಣಗೆರೆ (Davanagere): ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿಗಳಿಂದಾಗಿ ಬಡವರು ದಿನನಿತ್ಯದ ವಸ್ತುಗಳನ್ನು ಖರೀದಿಸಲು ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ದರ ಏರಿಕೆ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಏರಿಕೆಯಿಂದ ಸಾಮಾನ್ಯ ಬಡ ಜನರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಪ್ರತಿಭಟನಾಕಾರರು ಸರಕಾರಗಳ ವಿರುದ್ದ ಕಿಡಿಕಾರಿದರು.
ಬೆಲೆ ಏರಿಕೆ ತಕ್ಷಣವೇ ನಿಲ್ಲಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
Read also : ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಪತಿಭಟನೆಯಲ್ಲಿ ಆನಂದಪ್ಪ ಎಸ್.ಎಲ್. ಬಿಬಿಜಾನ್. ಗೀತಾಮ್ಮ. ಮಂಜುಳಾ. ರೇಣುಕಮ್ಮ. ಎಲ್ಲಮ್ಮ. ಜಂಶಿದ ಬಾನು. ಆಸ್ಮಾ, ರಾಮಚಂದ್ರ ಎಚ್, ನಿರ್ಮಲ, ಜ್ಯೋತಿ, ರಾಜೇಶ್ವರಿ ಉಪಸ್ಥಿತರಿದ್ದರು.