ದಾವಣಗೆರೆ : ಕನ್ನಡ ಭಾಷೆ ಮತ್ತು ಸಂಸ್ಕ್ರತಿಗೆ ಉಜ್ವಲವಾದ ಭವಿಷ್ಯವಿದೆ ಎಂದು ಸಾಹಿತಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರಿದ ಮಾಜಿ ಅಧ್ಯಕ್ಷರಾದ ಪ್ರೋ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಶಿರಮಗೊಂಡನಹಳ್ಳಿಯ ಅನ್ಮೋಲ್ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಜೆ.ಎಚ್.ಪಟೇಲ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಏರ್ಪಡಿಸಿದ್ದ ತಿಂಗಳ ಅತಿಥಿ ಮತ್ತು ಪ್ರಶಸ್ತಿ ಪುರಸ್ಕಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾವಿರ ವರ್ಷಕ್ಕೂ ಮಿಗಿಲಾದ ಇತಿಹಾಸ ಹೊಂದಿರುವ ಶ್ರೀಮಂತವಾದ ಮತ್ತು ವಿಶಿಷ್ಠವಾದ ಈ ಸಂಸ್ಕçತಿಗೆ ಮನಸೋಲದವರೆ ಇಲ್ಲ. ಇಂತಹ ಭಾಷೆ ಮತ್ತು ಸಂಸ್ಕçತಿಯನ್ನು ಗೌರವದಿಂದ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲಾ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ ಕಾರ್ಯಕ್ರಮ ಉದ್ಘಾಟಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಕೊಟ್ರೇಶ್ವರ್, ಟಿ.ವಸಂತ, ಕರುಣಾ ಟ್ರಸ್ಟ್ ಎಲ್.ನಿಂಗರಾಜ ಅವರಿಗೆ ಗ್ರೇಟಾಥನ್ ಬರ್ಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರೋ.ಬಿ.ಕೃಷ್ಣಪ್ಪ ಟ್ರಸ್ಟ್ನ ರುದ್ರಪ್ಪ ಹನಗವಾಡಿ, ಕರುಣಾಜೀವ ಕಲ್ಯಾಣ ಟ್ರಸ್ಟ್ನ ಶಿವನಕೆರೆ ಬಸವಲಿಂಗಪ್ಪ, ಅನ್ಮೋಲ್ ಶಾಲೆಯ ಸಿ.ಜಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಪ್ರಾಚಾರ್ಯರಾದ ಕೊಟ್ರೇಶ್ ಇತರರು ಇದ್ದರು.