Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ.ಮಹಾವೀರ ಮ.ಕರೆಣ್ಣವರ
ತಾಜಾ ಸುದ್ದಿ

ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ.ಮಹಾವೀರ ಮ.ಕರೆಣ್ಣವರ

Dinamaana Kannada News
Last updated: January 14, 2026 3:36 pm
Dinamaana Kannada News
Share
Davanagere
SHARE

ದಾವಣಗೆರೆ, ಜ.14 :ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ, ಅವರನ್ನು ಕಾನೂನು ಕ್ರಮದನ್ವಯ ಪೋಷಕರ ವಶಕ್ಕೆ ನೀಡಿದ ನಂತರ ಮಕ್ಕಳ ಮೇಲೆ ನಿಗಾವಹಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ ನಂತರ  ಅವರು ಬಾಲ ಮಂದಿರಗಳಲ್ಲಿ ಅವರನ್ನು ಪೋಷಿಸುತ್ತಾರೆ. ನಂತರ ವಾರಸುದಾರರ ಪತ್ತೆ ಹಚ್ಚಿ ಪೋಷಕರ ವಶಕ್ಕೆ ನೀಡಲಾಗುತ್ತಿದೆ , ನಂತರ ಪತ್ತೆ ಹಚ್ಚಿದ ಬಾಲ ಕಾರ್ಮಿಕರ ಬಗ್ಗೆ ಯಾವುದೇ ಮಾಹಿತಿಯು ಇಲಾಖೆಯಲ್ಲಿ ಇರುವುದಿಲ್ಲ. ಅದುದರಿಂದ ಮಕ್ಕಳ ರಕ್ಷಣಾ ಘಟಕ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ವಯಂಸೇವಾ ಸಂಸ್ಥೆಗಳು ಒಟ್ಟಾಗಿ ಪಾಲಕರ ವಶಕ್ಕೆ ನೀಡಿದ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ನಿಗಾವಹಿಸಬೇಕು. ಇಲ್ಲವಾದಲ್ಲಿ ಬಡತನ ಅಥವಾ ಕೌಟುಂಬಿಕ ಆರ್ಥಿಕ ಪರಿಸ್ಥಿತಿಯು ಅವರನ್ನು ಮತ್ತೆ ಬಾಲಕಾರ್ಮಿಕರನ್ನಾಗಿ ಮಾಡಬಹುದು. ಆದುದರಿಂದ ಮಕ್ಕಳು ಮತ್ತು ಪೋಷಕರೊಂದಿಗೆ ಆಪ್ತ ಸಮಾಲೋಚನೆ ಕಡ್ಡಾಯವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಇದುವರೆಗೆ 16 ಬಾಲ ಕಾರ್ಮಿಕ ಪ್ರಕರಣಗಳನ್ನು ಪತ್ತೆಹಚ್ಚಿದ್ದು ಆ ಬಾಲಕಾರ್ಮಿಕರು ಶಾಲೆಗೆ ಹೋಗುತ್ತಿದ್ದಾರೆ ಅಥವಾ ಪುನಃ ಕೆಲಸಕ್ಕೆ ಹೋಗುತ್ತಿದ್ದಾರೆ ಎಂಬುದರ ಬಗ್ಗೆ ವಿಸ್ತೃತವಾಗಿ ವರದಿ ನೀಡುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಬೀದಿನಾಟಕ, ಗೋಡೆಬರಹ, ಕರಪತ್ರಗಳು , ಆಟೋಪ್ರಚಾರ, ತರಬೇತಿ ಕಾರ್ಯಗಾರಗಳು, ಬಿತ್ತಿ ಪತ್ರಗಳು ಸಂಚಾರಿ ರಥ ಹಾಗೂ ಮಕ್ಕಳಿಗೆ ಪ್ರಬಂಧ ಸ್ಪರ್ಧೇಯನ್ನು ಏರ್ಪಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕಾರ್ಮಿಕ ಅಧಿಕಾರಿ ಸಭೆಗೆ ತಿಳಿಸಿದರು.

Read also : ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಮಾತನಾಡಿ ಪ್ರತಿ ಮಾಹೆ ತಾಲ್ಲೂಕು ಮಟ್ಟದಲ್ಲಿ ಬಾಲಕಾರ್ಮಿಕರನ್ನು ತಡೆಗಟ್ಟುವ ಬಗ್ಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತ್ರೈಮಾಸಿಕ ಸಭೆಯಲ್ಲಿ ಅನುಪಾಲನಾ ವರದಿಯನ್ನು ಮಂಡಿಸಬೇಕು, ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸದಸ್ಯರುಗಳು ಪ್ರಸಕ್ತ ಸಾಲಿನಲ್ಲಿ ಪತ್ತೆಯಾಗಿರುವ 16 ಬಾಲಕಾರ್ಮಿಕರ ಬಗ್ಗೆ ಪ್ರಸ್ತುತ ಅವರು ಶಾಲೆಗೆ ದಾಖಲಾಗಿರುವ ಬಗ್ಗೆ ಅಥವಾ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ವರದಿಯನ್ನು ನೀಡ ಬೇಕು , ಮಂಡಕ್ಕಿ ಬಟ್ಟಿ ಕೇಂದ್ರಗಳ ಮೇಲೆ ದಾಳಿ ನಡೆಸಬೇಕು ಮತ್ತು ಮಾಲೀಕರೊಂದಿಗೆ ಸಭೆ ನಡೆಸಿ ಬಾಲಕಾರ್ಮಿಕರ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುವಂತೆ, ಬಾಲಕಾರ್ಮಿಕರು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1098 , 112 ಗೆ ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ, ಪ್ರಸಕ್ತ ಸಾಲಿನಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ 7 ಬಾಲಕಾರ್ಮಿಕರಿಗೆ ತಲಾ 20,000/- ಗಳಂತೆ ಪರಿಹಾರವನ್ನು ವಿತರಿಸಲಾಯಿತು. 18 ವರ್ಷ ಪೂರ್ಣಗೊಂಡ ಬಾಲಕಾರ್ಮಿಕರಾದ ದಾವಣಗರೆ ತರುಣ್ ಮತ್ತು ಹರಿಹರದ ಹಾಶಮ್ ಇವರಿಗೆ 35000/- ಪರಿಹಾರ ಚೆಕ್ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೇಯಲ್ಲಿ ವಿಜೇತರಾದ 18 ಮಕ್ಕಳಿಗೆ ನಗದು ಬಹುಮಾನ, 5 ಜನರಿಗೆ ಆಹಾರದ ಕಿಟ್ ಅನ್ನು ವಿತರಿಸಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comJustice Mahavira M. KarennavaraKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Next Article Davanagere crime news ಪ್ರವಾಸಿಗರ ಸುಲಿಗೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ

ದಾವಣಗೆರೆ (Davanagere) : ಅಂಗವೈಕಲ್ಯ ಪಾಪವಲ್ಲ,  ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಅವಕಾಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ…

By Dinamaana Kannada News

ಬಾಪೂಜಿ ವಿದ್ಯಾಸಂಸ್ಥೆಯ ಎವಿಕೆ ಗ್ರಂಥಪಾಲಕ ಹೆಚ್. ಸತೀಶ್ ಗೆ ಪಿಹೆಚ್ ಡಿ ಪ್ರದಾನ

ದಾವಣಗೆರೆ: ಬಾಪೂಜಿ ವಿದ್ಯಾಸಂಸ್ಥೆಯ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಗ್ರಂಥಪಾಲಕ ಹೆಚ್. ಸತೀಶ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಇತ್ತೀಚೆಗೆ…

By Dinamaana Kannada News

ಎರಡು ಸಾವಿರ ವರ್ಷ ಇತಿಹಾಸವಿರುವ ಕನ್ನಡ ಉಳಿಸಿ : ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್ 

ದಾವಣಗೆರೆ (Davanagere): ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಅಷ್ಟೊಂದು ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?