ದಾವಣಗೆರೆ (Davanagere): ರಾಣಿ ಚನ್ನಮ್ಮ ಅವರು ಒಂದು ಸಮಾಜಕ್ಕೆ ಸೇರಿದವರಲ್ಲ. ಎಲ್ಲ ಸಮಾಜಗಳನ್ನು ಕಟ್ಟುವ ಕೆಲಸ ಮಾಡಿದಿ ವೀರ ವನಿತೆ. ಇಂತಹವರ ಜಯಂತಿ ಆಚರಿಸುವ ಮೂಲಕ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸಬೇಕಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲೂಕಿನ ಅಣಜಿ ಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಚನ್ನಮ್ಮ ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ, ಸದ್ಗುಣಗಳ ಖನಿ. ಕನ್ನಡದ ಹೆಣ್ಣು ಮಕ್ಕಳ ಪ್ರತಿನಿಧಿ. ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಗುತ್ತಿದ್ದರೂ, ವಾಸ್ತವವಾಗಿ ಇದು ಕಿತ್ತೂರು ಸಂಸ್ಥಾನ ಬ್ರಿಟಿಷರ ವಿರುದ್ಧ ವಿಜಯೋತ್ಸವ ಸಾಧಿಸಿದ ದಿನವಾಗಿದೆ ಎಂದರು.
ಕಿತ್ತೂರು ರಾಣಿ ಚನ್ನಮ್ಮ ಅವರ ಭಾವಚಿತ್ರದ ಮೆರವಣಿಗೆ ಗ್ರಾಮದ ರಾಜ ಬೀದಿಗಳಲ್ಲಿ ವಿಜೃಂಭಣೆಯಿಂದ ಅದ್ಧೂರಿ ನಡೆಯಿತು.
Read also : Bangalore | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ
ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಬಸವಲಿಂಗಪ್ಪ, ಪ್ರಕಾಶ್, ಮಲ್ಲಣ್ಣ, ರಾಜಣ್ಣ ಹಾಗೂ ಗ್ರಾಮಸ್ಥರು ಇದ್ದರು.