ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿರುವುದರಿಂದ ಜಿಲ್ಲಾ ವ್ಯಾಪ್ತಿಯ ಸರ್ವಜನಿಕರಿಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ.
ಕೆಎಸ್‌ಆರ್‌ಟಿಸಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 70220300175, ಪ್ರಾದೇಶಿಕ ಸಾರಿಗೆ ಕಚೇರಿ – 08192259848, ಪೊಲೀಸ್ ಕಚೇರಿ ನಿಯತ್ರಣ ಕೊಠಡಿ – 9480803200 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ – 1077 ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧಸ್ವಾಮಿ ತಿಳಿಸಿದ್ದಾರೆ.