ದಾವಣಗೆರೆ: 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕು ಕುರ್ಕಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಪ್ರಶಸ್ತಿ ವಿತರಿಸಿದರು.
ಈ ಸಂಧರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ, ಪುರಸ್ಕೃತಗೊಂಡ ದಾವಣಗೆರೆ ತಾಲೂಕು ಕುರ್ಕಿ ಗ್ರಾಮ ಪಂಚಾಯಿತಿ ಬೇರೆ ಗ್ರಾಮ ಪಂಚಾಯತ್ ಗಳಿಗೆ ಮಾದರಿಯಾಗಲಿ ಎಂದು ಹೇಳಿದರು.
ಕುರ್ಕಿ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದಕ್ಕೆ ಗ್ರಾ. ಪಂ..ಅಧ್ಯಕ್ಷರಾದ ಕೆ ಜಿ ನಾಗಮ್ಮ ಪಿಡಿಒ ಸುರೇಖಾ ಐ.ಬಿ ಗ್ರಾಪಂ ಸದಸ್ಯರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್. ಮಾಯಕೂಂಡ ಶಾಸಕ ಕೆ. ಎಸ್. ಬಸವಂತಪ್ಪ ಅಭಿನಂದಿಸಿದ್ದಾರೆ.
