ದಾವಣಗೆರೆ:
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿರುವುದು ಉತ್ತಮ ಕಾರ್‍ಯಕ್ರಮವಾಗಿದ್ದು, ಮಕ್ಕಳು ಬಡತನದ ಹೆಸರಿನಲ್ಲಿ ಲ್ಯಾಪ್‌ಟಾಪ್‌ಗಳನ್ನು ಮಾರಿಕೊಳ್ಳದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಅವಶ್ಯಕತೆ ಇದ್ದು, ಪ್ರತಿ ಹಂತದಲ್ಲೂ ಸಹ ಕಂಪ್ಯೂಟರ್ ಕಲಿಕೆ ಅವಶ್ಯಕತೆಯನ್ನು ತಿಳಿಸಿದ ಶಾಸಕರು ಬಡತನದ ನೆಪವೊಡ್ಡಿ ವಿದ್ಯಾಭ್ಯಾಸ ಮೊಟಕುಗೊಳಿಸದಂತೆ ತಿಳಿ ಹೇಳಿದರು.
ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ, ವಿದ್ಯಾರ್ಥಿ ಐಐಟಿ ಮತ್ತು ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.