ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾದ, ದಿವಂಗತ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು.

ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
