ದಾವಣಗೆರೆ (Davanagere): ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಲಿಯಾಖತ್ ಆಲಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಲಿಯಾಖತ್ ಆಲಿ ಅವರು ಕಾಂಗ್ರೆಸ್ ಪಕ್ಷದಲ್ಲಿನ ಸೇವೆ ಗುರುತಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ನಿರ್ದೇಶನದಂತೆ ಹಾಗೂ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರ ನೇಮಕ ಮಾಡಿದೆ.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಅನುಷ್ಠಾನ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಇವರು ಗಮನ ಹರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Read also : Davanager | ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರು ಪಾಲು