ದಾವಣಗೆರೆ : ನಗರದ ಜಿಲ್ಲಾಕ್ರೀಡಾಂಗಣದಲ್ಲಿ ದಾವಣಗೆರೆ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲಿಯಾಖತ್ ಆಲಿ ಎಂ.ಕೆ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ 70 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸನ್ಮಾನಿಸಿ ಗೌರವಿಸಿದರು.
Read also : ಹಿಂದಿ ವಿಷಯದ ಪರೀಕ್ಷೆಯ ಕಲ್ಪವೃಕ್ಷ : ಹಿಂದಿ ಪರೀಕ್ಷಾ ತೋಶಾ ಕೈಪಿಡಿ
ಈ ವೇಳೆ ಸಮಾರಂಭದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ , ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿ.ಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್, ಎಸ್ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಇನ್ನಿತರೆ ಗಣ್ಯರು ಭಾಗವಹಿಸಿದ್ದರು.
