ದಾವಣಗೆರೆ.ಆ.17 (Davanagere) ; ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ),
ವಿದೇಶಿ ವ್ಯಾಸಂಗ ಸಾಲ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00ಲಕ್ಷಗಳ ಮೀತಿಯಲ್ಲಿರಬೇಕು), ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಕನಿಷ್ಠ 2 ಎಕರೆ ಹೊಂದಿರಬೇಕು, ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯಗಳಿಗೆ (Loan facility ) ಆನ್ಲೈನ್ ಮೂಲಕ ಅರ್ಜಿ (application invitation) ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು ಪೋರ್ಟ್ಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಮತ್ತು ನಾಗರೀಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿದೆ.
Read also : Davangere school news | ಮಳೆಗೆ ಉದುರಿದ ಸರ್ಕಾರಿ ಶಾಲೆ ಹಂಚುಗಳು : ಪೋಷಕರಲ್ಲಿ ಆತಂಕ
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ https://upparadevelopment.karnataka.gov.in ಇಲ್ಲಿ ವಿಕ್ಷೀಸಬಹುದು ಎಂದು ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.